ಬೇಲೂರು-ಆರ್ಥಿಕವಾಗಿ ಬಡತನ ರೇಖೆಗಿಂತ ಹಿಂದಿರುವವರನ್ನು ಗುರುತಿಸಿ ಅವರಿಗೆ ಮೂಲಭೂತ ಸೌಕರ್ಯಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ವತಿಯಿಂದ ನೀಡಲಾಗುತ್ತಿದೆ ಎಂದು ಗ್ರಾಮಾಭಿವೃದ್ದಿ ಯೋಜನೆಯ ಅಧಿಕಾರಿ ಚಂದ್ರಶೇಖರ್ ತಿಳಿಸಿದರು.
ಪಟ್ಟಣದ ಅಂಬೇಡ್ಕರ್ ಬೀದಿಯಲ್ಲಿ ವಾಸವಿರುವ ಆರ್ಥಿಕವಾಗಿ ಸಂಕಷ್ಟದಲ್ಲಿರುವ ವೃದ್ಧ ಕುಟುಂಬಕ್ಕೆ ಪಡಿತರ ಕಿಟ್ ಹಾಗೂ ಮಾಶಾಸನ ವಿತರಿಸಿ ಮಾತನಾಡಿದ ಅವರು, ಈಗಾಗಲೇ ಬೇಲೂರು ತಾಲೂಕಿನಲ್ಲಿ 90 ಜನ ನಿರ್ಗತಿಕ ವೃದ್ಧ ಕುಟುಂಬಗಳಿಗೆ ಮಾಸಾಶನ ಪಡಿತರ ಕಿಟ್ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳು ಒದಗಿಸಲಾಗುತ್ತಿದೆ. ಇಂದು 20 ಜನರಿಗೆ ಬೇಕಾದಂತ ಮೂಲಭೂತ ಸೌಕರ್ಯಗಳು ಸೇರಿದಂತೆ ಪಡಿತರ ಸಾಮಗ್ರಿ ಕಿಟ್ ಗಳನ್ನು ವಿತರಿಸಲಾಗುತ್ತಿದೆ. ಅದರಂತೆ ವಾರ್ಷಿಕವಾಗಿ 90 ಜನರಿಗೆ 1ಕೋಟಿ 80 ಸಾವಿರ ಹಣವನ್ನು ಒಂದು ಸಾವಿರದಂತೆ ಪ್ರತಿತಿಂಗಳು ಮಾಸಾಶನ ನೀಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಸೋಮಣ್ಣ,ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನಾಧಿಕಾರಿಗಳ ಸಿಬ್ಬಂದಿಗಳು ಹಾಜರಿದ್ದರು.