ಕೆ.ಆರ್.ಪೇಟೆ-ಸೊಳ್ಳೆಗಳ ನಿಯಂತ್ರಣದಿoದ ಮಲೇರಿಯ ಡೆಂಗ್ಯೂ ಜ್ವರ ಹಾಗೂ ಚಿಕೂನ್ ಗುನ್ಯದಂತಹ ಮಾರಕ ರೋಗಗಳನ್ನು ತಡೆಗಟ್ಟಬಹುದು ಎಂದು ಗಂಜಿಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಧಿಕಾರಿ ಡಾ.ವಿನಯ್ ತಿಳಿಸಿದರು.
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಗಂಜಿಗೆರೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಹಮ್ಮಿಕೊಂಡಿದ್ದ ಮಲೇರಿಯಾ ಹಾಗೂ ಡೆಂಗ್ಯೂ ವಿರೋಧಿ ಮಾಸಾಚಾರಣೆ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದ ಡಾ”ವಿನಯ್ ಪರಿಸರ ಸ್ವಚ್ಛತೆ ಕಾಪಾಡಿಕೊಂಡು ಬರುವುದು ಎಲ್ಲರ ಜವಾಬ್ದಾರಿಯಾಗಿದೆ. ಸ್ವಚ್ಛತೆ ಇಲ್ಲದೆ ಹೋದಲ್ಲಿ ಸೊಳ್ಳೆಗಳ ಉತ್ಪತ್ತಿಯಿಂದ ಮಾರಣಾಂತಿಕ ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಸಾರ್ವಜನಿಕರು ಸ್ವಚ್ಛತೆಯ ಬಗ್ಗೆ ಗಮನಹರಿಸಿದಾಗ ಮಾತ್ರ ನಿಯಂತ್ರಣ ಸಾಧ್ಯವೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಾಥಮಿಕ ಆರೋಗ್ಯ ಸುರಕ್ಷಿತ ಅಧಿಕಾರಿ ಶ್ರೀಮತಿ ರಾಧಾ ಮಾತನಾಡಿ,ತೆಂಗಿನ ಚಿಪ್ಪು ಪ್ಲಾಸ್ಟಿಕ್ ಡಬ್ಬಿ ಗಳಲ್ಲಿ ನೀರು ಸಂಗ್ರಹವಾಗುವುದರಿoದ ಸೊಳ್ಳೆಗಳು ಉತ್ಪತ್ತಿಯಾಗಿ ರೋಗ ಹರಡಲು ಕಾರಣವಾಗುತ್ತದೆ. ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಂಡು ಬರಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪ್ರವೀಣ್ ಕುಮಾರ್,ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಸತೀಶ್, ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು,ನೀರುಗಂಟಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
–——-ಶ್ರೀನಿವಾಸ್ ಆರ್