
ಹಾಸನ-ಜನವರಿ 5ರಂದು ಹಾಸನದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ‘ಹಾಸನ ಓಪನ್ ನಾಲ್ಕನೇ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿ’ಗಳು ನಡೆಯಲಿವೆ.

ಹಾಸನ ಜಿಲ್ಲಾ ಕರಾಟೆ ಸಂಸ್ಥೆ ವತಿಯಿಂದ ಹಾಸನದ ಸಂಸದರಾದ ಶ್ರೇಯಸ್ ಪಟೇಲ್ ಮತ್ತು ಶಾಸಕರಾದ ಸ್ವರೂಪ್ ಪ್ರಕಾಶ್ ಅವರನ್ನು ಸಂಸ್ಥೆಯ ಅಧ್ಯಕ್ಷ ಅಂತರಾಷ್ಟ್ರೀಯ ಮಟ್ಟದಲ್ಲಿ ಕರಾಟೆ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗಳಿಸಿರುವ ಮಹಮ್ಮದ್ ಆರಿಫ್ ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಪೋಷಕರು ಸೇರಿದಂತೆ ಕ್ರೀಡಾಪಟುಗಳು ಉಪಸ್ಥಿತರಿದ್ದರು.