ಮೂಡಿಗೆರೆ:ವಿಧ್ಯಾರ್ಥಿಗಳು ಕಲಿಕೆಯೊಂದಿಗೆ ಕ್ರೀಡೆಗೂ ಆದ್ಯತೆ ನೀಡಿದಲ್ಲಿ ಮಹತ್ತರ ಸಾಧನೆ ಮಾಡಬಹುದು-ಎಸ್.ಲಕ್ಷ್ಮಿ ಪ್ರಜ್ಞಾ

ಮೂಡಿಗೆರೆ:ಕ್ರೀಡಾ ಕ್ಷೇತ್ರದಲ್ಲಿ ವಿಧ್ಯಾರ್ಥಿಗಳಿಗೆ ಬಹುದೊಡ್ಡ ಅವಕಾಶಗಳಿವೆ. ಕಲಿಕೆಯೊಂದಿಗೆ ಕ್ರೀಡೆಗಳಲ್ಲಿ ಆಸಕ್ತಿ ಬೆಳೆಸಿ ಕ್ರೀಡೆಗಳಲ್ಲಿ ತೊಡಗಿಸಿಕೊಂಡಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗಲಿದ್ದು ಆ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಬಹುದು ಎಂದು ಚಿನ್ನದ ಪದಕ ವಿಜೇತೆ ಅಂತರರಾಷ್ಟ್ರೀಯ ಕ್ರೀಡಾಪಟು ಎಸ್.ಲಕ್ಷ್ಮಿ ಪ್ರಜ್ಞಾ ಹೇಳಿದರು.

ಗುರುವಾರ ಪಟ್ಟಣದ ಎಂಇಎಸ್ ಶಾಲೆಯಲ್ಲಿ ನಡೆದ ಕ್ರೀಡಾ ದಿನಾಚರಣೆ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿ, ಶೈಕ್ಷಣಿಕ ಹಂತದಲ್ಲಿ ವಿಧ್ಯಾರ್ಥಿಗಳು ಅಂಕಗಳಿಕೆಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಆದರೆ ಪಾಠ ಪ್ರವಚನಗಳ ಕಲಿಕೆಯೊಂದಿಗೆ ಇತರೆ ಚಟುವಟಿಕೆಗಳಿಗೂ ವಿಧ್ಯಾರ್ಥಿಗಳು ಪ್ರಾಮುಖ್ಯತೆ ನೀಡುವಂತೆ ಪೋಷಕರು ಮಕ್ಕಳಿಗೆ ಅರಿವು ನೀಡಿದರೆ ತಮ್ಮ ಮಕ್ಕಳು ಉನ್ನತ ಮಟ್ಟದ ಸಾಧನೆ ಮಾಡಬಹುದಾಗಿದೆ. ಪಠ್ಯೇತರ ಚಟುವಟಿಕೆಗಳಲ್ಲಿ ಯಶಸ್ಸು ಪಡೆಯಲು ಉನ್ನತ ಗುರಿ ಹೊಂದಿರಬೇಕು ಎಂದು ತಿಳಿಸಿದರು.

ಪ.ಪಂ.ಉಪಾದ್ಯಕ್ಷ ಹೊಸ್ಕೆರೆ ರಮೇಶ್ ಮಾತನಾಡಿ, ಮಕ್ಕಳ ಬಾಲ್ಯವನ್ನು ಅಂಕಗಳಿಗೆ ಮಾತ್ರ ಸೀಮಿತಗೊಳಿಸಲಾಗುತ್ತದೆ. ಮಕ್ಕಳ ಆಸಕ್ತಿಗೆ ಅನುಗುಣವಾಗಿ ಶಿಕ್ಷಣ ನೀಡಬೇಕು.ಅತ್ಯುತ್ತಮ ಶಿಕ್ಷಣ ಪಡೆದ ವಿಧ್ಯಾರ್ಥಿಗಳಿಗೆ ಸಮಾಜದಲ್ಲಿ ದೊಡ್ಡ ಗೌರವ ಸಿಗುತ್ತದೆ. ಹಾಗೆಯೇ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಮತ್ತಷ್ಟು ದೊಡ್ಡ ಮಟ್ಟದಲ್ಲಿ ಸ್ಥಾನಮಾನ ದೊರಕುತ್ತದೆ. ಯಾವುದೇ ಕ್ಷೇತ್ರವನ್ನೂ ನಿರ್ಲಕ್ಷಿಸದೆ ವಿಧ್ಯಾರ್ಥಿಗಳು ಕಲಿಕೆಯೊಂದಿಗೆ ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಲ್ಲಿ ಅತ್ಯುತ್ತಮ ಸಾಧನೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.

ಹರೀಶ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಎಂ.ಎಸ್.ಹರೀಶ್ ಮಾತನಾಡಿ, ಕ್ರೀಡೆ ಎಂಬುದು ಶಿಕ್ಷಣದ ಒಂದು ಭಾಗ. ಶಾಲೆಗಳಲ್ಲಿ ಪ್ರತಿವರ್ಷವೂ ವಿಧ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ ನೀಡಲೆಂದೇ ಹಲವು ಚಟುವಟಿ ಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ. ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ವಿಧ್ಯಾರ್ಥಿಗಳು ಕ್ರೀಡಾ ವಿಭಾಗದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿರುವುದು ನಮ್ಮ ಸಂಸ್ಥೆಗೆ ಊರಿಗೆ ಕೀರ್ತಿ ತಂದoತಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಂಇಎಸ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲೆ ಚಿoತು ಮತ್ತಿತರರಿದ್ದರು.

———–ವಿಜಯಕುಮಾರ್.ಟಿ.ಮೂಡಿಗೆರೆ

Leave a Reply

Your email address will not be published. Required fields are marked *

× How can I help you?