ಕೆ.ಆರ್.ಪೇಟೆ:ಇದೇ ಜನವರಿ 11ರಂದು ಬೆಂಗಳೂರಿನ ನೆಲಮಂಗಲದ ಬಳಿ ಇರುವ ಶ್ರೀ ತೈಲೇಶ್ವರ ಗಾಣಿಗರ ಸಂಸ್ಥಾನ ಮಠದಲ್ಲಿ ಪೀಠಾಧ್ಯಕ್ಷ ರಾದ ಶ್ರೀ ಶ್ರೀ ಪೂರ್ಣಾನಂದ ಪುರಿ ಮಹಾಸ್ವಾಮೀಜಿ ಅವರ ನೇತೃತ್ವದಲ್ಲಿ ಗಾಣಿಗರ ಹಬ್ಬ ಹಾಗೂ ಗಾಣಿಗರ ಬೃಹತ್ ಸಮಾವೇಶ ಸಮಾರಂಭ ವನ್ನು ಹಮ್ಮಿಲಾಗಿದೆ ಎಂದು ಮಂಡ್ಯ ಜಿಲ್ಲಾ ಗಾಣಿಗರ ಸಂಘದ ಶಿವಕುಮಾರ್ ತಿಳಿಸಿದರು.
ಜಿಲ್ಲಾ ಗಾಣಿಗರ ಸಂಘದ ಉಪಾಧ್ಯಕ್ಷ ಶ್ರೀನಿವಾಸ್, ಕಾರ್ಯಾಧ್ಯಕ್ಷ ಎಂ.ಲೋಕೇಶ್, ಸಂಘಟನಾ ಕಾರ್ಯದರ್ಶಿ ಸಂದೀಪ್, ತಾಲ್ಲೂಕು ಗಾಣಿಗರ ಸಂಘದ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷ ಆಟೋ ವಾಸು, ಕಾರ್ಯದರ್ಶಿ ಅರುಣ್ ಕುಮಾರ್, ಸಂಘಟನಾ ಕಾರ್ಯದಸೀ ಪುಟ್ಡರಾಜು, ಗ್ರಾ.ಪಂ. ಸದಸ್ಯ ಆರ್.ಶ್ರೀನಿವಾಸ್ ಇತರರ ನೇತೃತ್ವದಲ್ಲಿ ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಹ್ವಾನ ಪತ್ರಿಕೆಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.
ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಕೆ.ಎನ್.ರಾಜಣ್ಣ, ಶಿವರಾಜ್ ತಂಗಡಜಿ, ಇತರರು ಭಾಗವಹಿಸುವರು. ಸ್ವಾಗತ ಸಮಿತಿ ಅಧ್ಯಕ್ಷ ಜಿ.ಎನ್.ವೇಣುಗೋಪಾಲ್ ಅಧ್ಯಕ್ಷತೆ ವಹಿಸುವರು. ಜನಾಂಗದ ಐ.ಎ.ಎಸ್.ಅಧಿಕಾರಿ ಡಾ.ವಾಸಂತಿ ಅಮರ್, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಶಾಸಕರಾದ ನೆಲಮಂಗಲ ಶ್ರೀನಿವಾಸ್, ಕುಮಟಾ ಶಾಸಕ ದಿನಕರಶೆಟ್ಟಿ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಕುಮಟ ಮಾಜಿ ಶಾಸಕಿ ಶಾರದಮೋಹನ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು. ಹಾಗಾಗಿ ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಗಾಣಿಗ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂಧು ಸಮಾವೇಶವನ್ನು ಯಶಸ್ವಿ ಮಾಡಿಕೊಡಬೇಕು ಎಂದು ಜಿಲ್ಲಾ ಗಾಣಿಗರ ಸಂಘದ ಅಧ್ಯಕ್ಷ ಶಿವಕುಮಾರ್ ಮನವಿ ಮಾಡಿದ್ದಾರೆ.
————————-ಶ್ರೀನಿವಾಸ್ ಆರ್