ತರೀಕೆರೆ-ತಾಲ್ಲೂಕಿನ ಗಡಿ ಭಾಗದ ಕಾಮನದುರ್ಗ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಮಾನಸ ರಜನಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ಕಾಮನದುರ್ಗ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಈ ಹಿಂದೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅಧಿಕಾರ ನಡೆಸಿದ ಆರ್.ರಂಗಸ್ವಾಮಿ ಅವರ ಅವಧಿ ಮುಗಿದ ನಂತರ ಎರಡನೇ ಅವಧಿಗೆ ಅಧ್ಯಕ್ಷರ ಆಯ್ಕೆ ಸಂಬoಧ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅಧ್ಯಕ್ಷರ ಆಯ್ಕೆ ಸುಸೂತ್ರವಾಗಿ ನಡೆಯಿತು.
ಚುನಾವಣಾಧಿಕಾರಿಯಾಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆರ್.ದೇವೆಂದ್ರಪ್ಪ ಕಾರ್ಯ ನಿರ್ವಹಿಸಿದರು.
ನೂತನ ಅಧ್ಯಕ್ಷರನ್ನು ಗೌರವಿಸಿ ಮಾತನಾಡಿದ ಮಾಜಿ ಶಾಸಕ ಡಿ.ಎಸ್.ಸುರೇಶ್, ಗ್ರಾಮ ಪಂಚಾಯಿತಿ ಸದಸ್ಯರ ಮತ್ತು ಗ್ರಾಮಸ್ಥರ ಸಹಕಾರ ದೊಂದಿಗೆ ಗ್ರಾಮದ ಅಭಿವೃದ್ಧಿಗೆ ನೂತನ ಅಧ್ಯಕ್ಷರು ಶ್ರಮಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಕಾಮನದುರ್ಗ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸರಸ್ವತಿ ಲೋಕೇಶ್, ಸದಸ್ಯರಾದ ಡಿ.ಜನಾರ್ಧನ್, ಮುಬಾರಕ್, ಆರ.ರಂಗಸ್ವಾಮಿ, ಗೀತಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಹಾಸ್, ಗ್ರಾಮಸ್ಥರಾದ ಧರ್ಮಲಿಂಗo, ಪ್ರದೀಪ್, ಉಮೇಶ್ನಾಯ್ಕ, ನೌಶದ್, ವಿಷ್ಣುನಾಯ್ಕ, ಹರೀಶ್, ಪ್ರಶಾಂತ್, ಬಲರಾಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.