ಆಲೂರು-ಆದಿ ಮಾನವನಿಂದ ಹಿಡಿದು ಆಧುನಿಕ ಮಾನವನವರೆಗೆ ವಿಕಾಸ ಹೊಂದಲು ಸಹಕಾರ ತತ್ವವೇ ಮೂಲ ಕಾರಣ-ಆರ್.ಟಿ ದೇವೇಗೌಡ ಅಭಿಪ್ರಾಯ

ಆಲೂರು-ಆದಿ ಮಾನವನಿಂದ ಹಿಡಿದು ಆಧುನಿಕ ಮಾನವನವರೆಗೆ ವಿಕಾಸ ಹೊಂದಲು ಸಹಕಾರ ತತ್ವವೇ ಮೂಲ ಮಂತ್ರವಾಗಿದೆ. ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿ ಸಿಕೊಂಡರೆ ಸುಸಂಸ್ಕೃತ ನಿರ್ಮಾಣಕ್ಕೆ ನಾಂದಿ ಹಾಡಬಹುದು ಎಂದು ಸಹಕಾರ ರತ್ನ ಪುರಸ್ಕೃತ ಆರ್.ಟಿ ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ಆಲೂರು ಪಟ್ಟಣದ ಟಿ.ಎ.ಪಿ.ಸಿ.ಎಂ.ಎಸ್ ಆವರಣದಲ್ಲಿ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೆಚ್.ಡಿ.ಸಿ.ಸಿ ನಿರ್ದೇಶಕ ಜಗದೀಶ್ ಕಬ್ಬಿನಹಳ್ಳಿ ಮಾತನಾಡಿ, ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿಯನ್ನು ಹಾಗೂ ಸಾಮಾಜಿಕ ಸ್ಥಿತಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ದೃಷ್ಟಿಯಿಂದ ಸಹಕಾರಿ ಸಂಘಗಳು ಪೂರಕವಾಗಿವೆ.ಸಮಾಜದಲ್ಲಿ ಮಹಿಳೆಯರು ಯುವಕರು ಅಬಲರ ಶ್ರೇಯೋಭಿವೃದ್ಧಿಗೆ ಸಹಕಾರ ಸಂಘಗಳು ಶ್ರಮಿಸುತ್ತಿವೆ.ಗ್ರಾಮೀಣ ಭಾಗದ ಜನರು ಇದರ ಸದುಪಯೋಗವನ್ನು ಪಡೆದುಕೊಂಡಾಗ ಮಾತ್ರ ಈ ಸಂಘಕ್ಕೆ ಹೆಚ್ಚಿನ ಶಕ್ತಿ ಸಿಗುತ್ತದೆ ಎಂದರು.

ಯಾವುದೇ ರಾಜಕೀಯ ಪಕ್ಷಗಳು ಬಗೆಹರಿಸದ ಸಮಸ್ಯೆಗಳನ್ನು ಸಹಕಾರ ಸಂಘಗಳು ತಮ್ಮ ಹೆಗಲ ಮೇಲೆ ಹಾಕಿಕೊಂಡು ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಸಾಮಾಜಿಕವಾಗಿ ಆರ್ಥಿಕವಾಗಿ ಶೈಕ್ಷಣಿಕವಾಗಿ ಸಬಲರನಾಗಿ ಮಾಡುತ್ತಿದೆ.ಇಂದಿನ ಯುವ ಜನತೆ, ಮಹಿಳೆಯರು ಹಾಗೂ ಸಾಮಾಜಿಕವಾಗಿ ತುಳಿತಕ್ಕೆ ಒಳಗಾದವರು,ಸಹಕಾರಿ ಸಂಘಗಳನ್ನು ಸೇರುವ ಮೂಲಕ ತಮ್ಮ ಅಭ್ಯುದಯವನ್ನು ಕಂಡುಕೊಳ್ಳಬಹುದು.ನನ್ನ ಅಧಿಕಾರ ಅವಧಿಯಲ್ಲಿ ಆಲೂರು ಸಕಲೇಶಪುರ ಕ್ಷೇತ್ರದ ರೈತರಿಗೆ ಹಲವಾರು ಯೋಜನೆಗಳ ನೀಡುವ ಮೂಲಕ ಸಾಮಾಜಿಕ ಹೋರಾಟಕ್ಕೆ ನ್ಯಾಯ ಕೊಡಿಸಿದ್ದೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜ್, ಹಾಸನ ಸಹಕಾರ ಜಿಲ್ಲಾ ಸಹಕಾರ ಒಕ್ಕೂಟ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಎಚ್‌.ಪಿ ಮೋಹನ್,ಹೆಚ್.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ನಾಗರಾಜೇಗೌಡ, ಮಾಜಿ ಉಪಾಧ್ಯಕ್ಷ ಕೆ. ಎಸ್ ಮಂಜೇಗೌಡ, ರಾಜಪ್ಪ ಗೌಡ, ಮಾಜಿ ಅಧ್ಯಕ್ಷ ಪಿ.ಎಲ್ ಲಿಂಗರಾಜು, ದಿ ಪ್ಲಾಂಟರ್ಸ್ ಕ್ಲಬ್ ಅಧ್ಯಕ್ಷ ಬಿ.ಎಂ ನಾಗರಾಜು, ಪ್ರಾಥಮಿಕ ಸಹಕಾರ ಬ್ಯಾಂಕ್ ಅಧ್ಯಕ್ಷ ಎಚ್.ಎಸ್ ಉದಯಕುಮಾರ್, ಸಕಲೇಶಪುರ ಟಿ.ಎ. ಪಿ. ಸಿ. ಎಮ್ .ಎಸ್ ಅಧ್ಯಕ್ಷ ಶಶಿಕುಮಾರ್, ಮುಂತಾದವರು ಉಪಸ್ಥಿತರಿದ್ದರು.

——-—ಧರ್ಶನ ಕೆರೇಹಳ್ಳಿ

Leave a Reply

Your email address will not be published. Required fields are marked *

× How can I help you?