ಹಾಸನ – ಜಿಲ್ಲೆಯ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವ್ಯಾಪ್ತಿಯಲ್ಲಿ ರಾತ್ರಿವೇಳೆ ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್ ಬಳಸಬೇಡಿ ಇದರಿಂದಾಗಿ ತೋಟದ ವಾಸಿಗಳಿಗೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ .
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ನಿತ್ಯ ಸಂಜೆ.6 ಗಂಟೆಯಿಂದ ಬೆಳಗ್ಗೆವರೆಗೆ ನೀರಾವರಿ ಫೀಡರ್‌ಗಳ ಮೂಲಕ ತೋಟದ ಮನೆಗಳ ಗೃಹ ಬೆಳಕೆಗೆ ಹಾಗೂ ಅಲ್ಲಿ ವಾಸಿಸುವ ವಿದ್ಯಾರ್ಥಿಗಳಿಗಾಗಿ ಸಿಂಗಲ್ ಫೇಸ್ ವಿದ್ಯುತ್ತನ್ನು ಓಪನ್ ಡೆಲ್ಟಾ ಮೂಲಕ ನೀಡಲಾಗುತ್ತಿದೆ.
ಈ ಸಮಯದಲ್ಲಿ ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್‌ಗಳನ್ನು ಬಳಸಬಾರದು ಎಂದು ರೈತರಿಗೆ ಚಾ.ವಿ.ಸ.ನಿ.ನಿಯಮಿತದ ಹಾಸನ ಕಾರ್ಯ ಮತ್ತು ಪಾಲನಾ ವೃತ್ತದ ಅಧೀಕ್ಷಕ ಇಂಜಿನಿಯರ್ ಮನವಿ ಮಾಡಲಾಗಿದೆ.
ಹೀಗೆ ಸಿಂಗಲ್ ಫೇಸ್ ವಿದ್ಯುತ್ ಪೂರೈಸುವಾಗ ಕೆಲವರು ಕೃಷಿ ಪಂಪ್ ಸೆಟ್‌ಗಳನ್ನು ನೀರಾವರಿ ಫೀಡರ್ ಮೂಲಕ ಬಳಸುತ್ತಿದ್ದು ಇದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ.
ಇದರಿಂದಾಗಿ ಕಾಡಂಚಿನ ಪ್ರದೇಶಗಳಲ್ಲಿ ವಾಸವಾಗಿರುವ ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ ಆದ್ದರಿಂದ ಈ ಸಮಯದಲ್ಲಿ ಸಿಂಗಲ್ ಫೇಸ್ ಕೃಷಿ ಪಂಪ್‌ಸೆಟ್ ಬಳಸದಂತೆ ಮನವಿ ಮಾಡಲಾಗುತ್ತಿದೆ.
ಒಂದು ವೇಳೆ ರಾತ್ರಿ ವೇಳೆಯಲ್ಲಿ ಸಿಂಗಲ್ ಫೇಸ್‌ನಲ್ಲಿ ಪಂಪ್ ಸೆಟ್‌ಗಳು ಚಾಲನೆ ಮಾಡಿ ಫೀಡರ್ ಟ್ರಿಪ್ ಆಗುವುದರಿಂದ ವಿದ್ಯುತ್ ವ್ಯತ್ಯಯ ವಾದಲ್ಲಿ ನಿಗಮವು ಜವಾಬ್ದಾರಿಯಾಗಿರುವುದಿಲ್ಲ.
ಆದ್ದರಿಂದ ರಾತ್ರಿ ವೇಳೆಯಲ್ಲಿ ಸಿಂಗಲ್ ಫೇಸ್‌ನಲ್ಲಿ ಪಂಪ್ ಸೆಟ್‌ಗಳನ್ನು ಚಾಲನೆಗೊಳಿಸಬಾರದು ಎಂದು ಚಾ.ವಿ.ಸ.ನಿ.ನಿಯಮಿತದ ಹಾಸನ ಕಾರ್ಯ ಮತ್ತು ಪಾಲನಾ ವೃತ್ತದ ಅಧೀಕ್ಷಕ ಇಂಜಿನಿಯರ್(ವಿ) ತಿಳಿಸಿದ್ದಾರೆ.