ಅರಕಲಗೂಡು: ಸರ್ಕಾರಿ ಆಸ್ಪತ್ರೆಯ ವೈದ್ಯರೊಂದಿಗೆ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಲು ಮುಂದಾದ ವ್ಯಕ್ತಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ಕೋರಿ ವೈದ್ಯರು ಮತ್ತು ಸಿಬ್ಬಂದಿ ಶುಕ್ರವಾರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದರು.
ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ || ಸ್ವಾಮಿಗೌಡ ಸುದ್ದಿಗಾರರೊಂದಿಗೆ ಮಾತನಾಡಿ, ಗುರುವಾರ ರಾತ್ರಿ 10 ಗಂಟೆ ಸಮಯದಲ್ಲಿ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ಪಡೆದು ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಡಾ ಮುಖೇಶ್ ಮತ್ತು ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ನಡೆದಿದೆ.
ರಾತ್ರಿ ಪಾಳಿಯಲ್ಲಿ ಈ ರೀತಿಯ ಘಟನೆಗಳು ಪದೇ, ಪದೇ ಮರುಕಳಿಸುತ್ತಿದ್ದು ವೈದ್ಯರು ಮತ್ತು ಸಿಬ್ಬಂದಿಗೆ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗುತ್ತಿದೆ. ಪೊಲೀಸರನ್ನು ನೇಮಿಸಿ ರಕ್ಷಣೆ ನೀಡಬೇಕು. ಹಲ್ಲೆ ನಡೆಸಲು ಮುಂದಾದ ಆರೋಪಿಯ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ನೀಡಲಾಗಿದೆ ಎಂದರು.
ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟರಾಜ್, ವೈದ್ಯರು ಮತ್ತು ಸಿಬ್ಬಂದಿ ಇದ್ದರು.
-ಶಶಿಕುಮಾರ, ಅರಕಲಗೂಡು