ಅರಕಲಗೂಡು- ತಾಲೂಕು ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹೊಳಲಗೋಡು ಶಾಲೆಯಲ್ಲಿ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಹೀನ ಕೌಸರ್ ಮುಖ್ಯ ಶಿಕ್ಷಕ ಶಾಂತಕುಮಾರ್ ಎನ್ ಎಸ್ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಶಂಕರ್ ಹಾಗೂ ಸಹ ಶಿಕ್ಷಕರು ಭಾಗವಹಿಸಿದ್ದರು.
ಶಾಲಾ ವ್ಯಾಪ್ತಿಯಲ್ಲಿ ಬರುವ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ತಿಳಿಸಲಾಯಿತು. ಹಾಗೂ ಖಾಸಗಿ ಶಾಲೆಗಳಿಗೆ ಹೋಗುತ್ತಿದ್ದ ಮಕ್ಕಳ ಮನೆಗಳಿಗೆ ಭೇಟಿ ನೀಡಿ, ಪೋಷಕರಿಗೆ ಸರ್ಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಎಸ್ಡಿಎಂಸಿ ಅಧ್ಯಕ್ಷರು ಮನವರಿಕೆ ಮಾಡಿಕೊಟ್ಟರು.
ಶಂಕರ್ ಮಾತನಾಡಿ, ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆ ಉಳಿಸಿ ಎಂದು ಪೋಷಕರಿಗೆ ತಿಳಿಸಿದ ಅವರು, ಮುಖ್ಯ ಶಿಕ್ಷಕರು ಸರ್ಕಾರಿ ಶಾಲೆಯಲ್ಲಿ ಉತ್ತಮ ನುರಿತ ಶಿಕ್ಷಕರಿದ್ದು ಸರ್ಕಾರಿ ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಪೂರಕ ವಾತಾವರಣವನ್ನು ನಿರ್ಮಿಸಿ ಮಕ್ಕಳ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಈ ಕಾರ್ಯಕ್ರಮ ಒಂದು ವಿನೂತನ ಕಾರ್ಯಕ್ರಮವಾಗಿದ್ದು, ಸರ್ಕಾರಿ ಶಾಲೆಗಳ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ.
-ಶಶಿ ಕುಮಾರ
–