ಅರೇಹಳ್ಳಿ:ಹಾಸನದ ವಾಸವಿ ವಿದ್ಯಾಸಂಸ್ಥೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಕಲೋತ್ಸವ ಹಾಗೂ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬೇಲೂರು ತಾಲೂಕು ಅರೇಹಳ್ಳಿ ರೋಟರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸೈಯದ ಅದೀಬಾ ಷಾಹ್ ಹುಸೈನಿ ಇಂಗ್ಲೀಷ್ ಭಾಷಣ ವಿಭಾಗದಿಂದ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿನಿ ಸಾಧನೆಗೆ ಶಾಲಾಡಳಿತ ಮಂಡಳಿ ಸದಸ್ಯರು,ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.