ಚಿಕ್ಕಮಗಳೂರು:- ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದರು ಮತ್ತು ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿರುವ ಚಿಕ್ಕಬಳ್ಳಾಪುರ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಬಿಜೆಪಿ ಮುಖಂಡರುಗಳು ಮಂಗಳವಾರ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು.
ಈ ಕುರಿತು ಮಾತನಾಡಿದ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಸೀತರಾಮಭರಣ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಯೋಗಿ ನಾರಾಯಣ ಯತೀಂದ್ರ ಜಯಂತಿ ಕರ‍್ಯಕ್ರ ಮದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಲೋಕಸಭಾ ಸಂಸದರು, ಸಾರ್ವಜನಿಕರಿಗೆ ನಿಂದಿಸಿರುವುದು ಖಂಡನೀಯ ಎಂದರು.
ಕೈವಾರ ತಾತಯ್ಯ ಕಾರ್ಯಕ್ರಮದಲ್ಲಿ ಏಕಾಏಕಿ ಮೈಕ್‌ನಲ್ಲಿ ಸಂಸದ ಪಿ.ಸಿ.ಮೋಹನ್ ಮತ್ತು ಸಾರ್ವ ಜನಿಕರಿಗೆ ನಿಂದಿಸುವ ಮೂಲಕ ಘನತೆ, ಗೌರವಕ್ಕೆ ಧಕ್ಕೆ ತಂದು ಪರಸ್ಪರ ಎರಡು ಗುಂಪುಗಳ ಮಧ್ಯೆ ಗಲ ಭೆಗೆ ಪ್ರಚೋದನೆ ನೀಡಿದ್ದಾರೆ. ಕೂಡಲೇ ಶಾಸಕರನ್ನು ನ್ಯಾಯಸಂಹಿತೆ ಹಾಗೂ ಶಾಂತಿಭಂಗ ಆರೋಪದಡಿ ಪ್ರಕರಣ ದಾಖಲಿಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನೇಕಾರ ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯ ವಿನೋದ್ ಬೊಗಸೆ, ಜಿಲ್ಲಾ ಮಾಧ್ಯಮ ಸಹ ಪ್ರಮುಖ ಕೇಶವ ಹಿರೇಮಗಳೂರು, ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂ ಜುನಾಥ್, ನ.ರಾ.ಪುರ ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಂಜು ಶೆಟ್ಟಿ, ಸಚಿನ್ ಉಜ್ಜಿನಿ ಹಾಜರಿದ್ದರು.
- ಸುರೇಶ್ ಎನ್.