ಚಾಮರಾಜನಗರ-ಕಾವೇರಿ ಕ್ರಿಯಾ ಸಮಿತಿಯ ಅಧ್ಯಕ್ಷ ಎಸ್ ಜಯಪ್ರಕಾಶ್ ಮೇಕೆದಾಟುವಿಗೆ ಸಮಿತಿಯ ಪದಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೇಕೆದಾಟು ಹೋರಾಟ ಸಮಿತಿಯ ಅಧ್ಯಕ್ಷ ಸಂಪತ್ ಕುಮಾರ್ ರೊಂದಿಗೆ ಎಸ್ ಜಯಪ್ರಕಾಶ್ ಮೇಕೆದಾಟು ಆಣೆಕಟ್ಟು ಕಟ್ಟುವ ವಿಷಯದಲ್ಲಿನ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿ ಆ ಬಗ್ಗೆ ಸರಕಾರದ ಗಮನ ಸೆಳೆಯಲು ನಿರ್ಧರಿಸಿದರು.
ಈ ಸಂದರ್ಭದಲ್ಲಿ ಕಾವೇರಿ ಕ್ರಿಯಾ ಸಮಿತಿಯ ಕಾರ್ಯದರ್ಶಿ ತೇಜೇಶ್ ಲೋಕೇಶ್ ಗೌಡ, ವರಕೂಡು ಕೃಷ್ಣೇಗೌಡ, ಸಿ ಹೆಚ್ ಕೃಷ್ಣಪ್ಪ ಹಾಗೂ ನಾಗರಾಜ್ ಉಪಸ್ಥಿತರಿದ್ದರು.
—————–ಮಧುಕುಮಾರ್