ಚಿಕ್ಕಮಗಳೂರು- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಯ ಜಿಲ್ಲೆಯ ಯಶೋಗಾಥೆಯ, ಚಿಕ್ಕಮಗಳೂರು ಜಿಲ್ಲಾ ಪ್ರಗತಿ ನೋಟ ಕೈಪಿಡಿಯನ್ನು ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಬಿಡುಗಡೆ ಮಾಡಿದರು.

ಕ್ರೆಡಿಲ್ ಅಧ್ಯಕ್ಷ ಹಾಗೂ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ, ಶಾಸಕರುಗಳಾದ ಹೆಚ್.ಡಿ.ತಮ್ಮಯ್ಯ, ಕೆ.ಎಸ್.ಆನಂದ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶಮಂತ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಜೆ.ಮಂಜೇಗೌಡ ಇದ್ದರು.