ಚಿಕ್ಕಮಗಳೂರು:- ಜಿಲ್ಲಾ ವಕ್ಪ್ ಸಲಹಾ ಸಮಿತಿಯ ಪ್ರಗತಿ ಪರಿಶೀಲನಾ ಮತ್ತು ವಕ್ಫ್ ದಾಖಲಾತಿಗಳ ಪರಿಶೀಲನಾ ಕಾರ್ಯಾಗಾರ ಮಹತ್ವದ ಮಹಾ ಸಭೆಯನ್ನು ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್ ಶಾಹಿದ್ ರಜ್ವಿ ರವರ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ನಡೆಯಿತು.
ಸಭೆಯಲ್ಲಿ ಜಿಲ್ಲಾದ್ಯಂತ ಮಸೀದಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಧಾರ್ಮಿಕ ಮುಖಂಡರು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.
ಬಳಿಕ ಮಾತನಾಡಿದ ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್ ಶಾಹಿದ್ ರಜ್ವಿ ಸುಮಾರು 32 ತಿಂಗಳ ಅಧಿಕಾರಾವಧಿಯಲ್ಲಿ ಯಶಸ್ವಿಯಾಗಿ ನಿರ್ವಹಿಸಿದ್ದು ಅನೇಕ ವಿವಾದಗಳು ಸಮಸ್ಯೆಗಳನ್ನು ಕಾ ನೂನಿನ ಚೌಕಟ್ಟಿನಲ್ಲಿ ಶಾಶ್ವತವಾಗಿ ಬಗೆಹರಿಸಲಾಗಿದ್ದು ವಕ್ಫ್ ಸಂಸ್ಥೆಗಳ ಅಭಿವೃದ್ಧಿಗೆ ಮಂಡಳಿ ವತಿಯಿಂದ 15.50 ಕೋಟಿ ಮೊತ್ತದ ಅನುದಾನವನ್ನು ನೀಡಲಾಗಿದೆ ಎಂದು ತಿಳಿಸಿದರು.

ಇತ್ತೀಚೆಗೆ ವಕ್ಫ್ ವಿಧೇಯಕ ತಿದ್ದುಪಡಿಯ ವಿರುದ್ಧ ತಮ್ಮ ಸ್ವಇಚ್ಛೆಯಿಂದ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ ವಿವರಿಸುತ್ತ ಜಿಲ್ಲೆಯಲ್ಲಿ ಇರುವ ವಕ್ಫ್ ಆಸ್ತಿಗಳನ್ನು ಸಂರಕ್ಷಿಸಲು ಸಮಿತಿಗೆ ಜಿಲ್ಲಾದ್ಯಂತ ಸಂಸ್ಥೆಗಳ ಪದಾಧಿಕಾರಿಗಳು ಸಹಕರಿಸುವಂತೆ ಸೂಚನೆ ನೀಡಿದರು.
ವಿವಿದ ಸಂಸ್ಥೆಗಳ ಪ್ರತಿನಿಧಿಗಳಿಂದ ಸಮಾಲೋಚನೆ ನಡೆಸಿ ವಿವಿದ ಅಭಿಪ್ರಾಯಗಳನ್ನು ಸಂಗ್ರಹಿಸಿ ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ವಕ್ಫ್ ತಿದ್ದುಪಡಿಯ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ ವನ್ನು ಆಯೋಜಿಸಲು ನಿರ್ಧರಿಸಲಾಯಿತು.

ಈ ಸಭೆಯಲ್ಲಿ ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷ ಅಲ್ ಹಾಜ್ ಫೈರೋಜ್ ಅಹಮದ್ ರಜ್ವಿ, ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷ ಇರ್ಫಾನ್ ಬೇಗ್, ಮೊಹಮ್ಮದ್ ರಫಿ, ಸದಸ್ಯರಾದ ಯೂಸುಫ್ ಹಾಜಿ, ಫಾರೂಖ್ ಸಲೀಂ ರಜ್ವಿ, ಮನ್ಸೂರ್ ಅಹಮದ್, ನಾಸೀರ್, ಮೊಹಮದ್ ಯೂಸುಫ್,ಸೇರಿದಂತೆ ವಕ್ಫ್ ಅಧಿಕಾರಿಗಳು ಜಿಲ್ಲಾ ವಕ್ಫ್ ಕಾರ್ಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
– ಸುರೇಶ್ ಎನ್.