ಚಿಕ್ಕಮಗಳೂರು:- ಗ್ರಾಮ ಪಂಚಾಯಿತಿ ನೌಕರರಿಗೆ ಆರೋಗ್ಯವಿಮೆ ಸೌಲಭ್ಯ ನೀಡಬೇಕು ಎಂದು ಕೇಂದ್ರ ಕಾರ್ಮಿಕ ಸಚಿವ ಡಾ.ಮನ್ಸುಕ್ ಮಾಂಡವೀಯ ಅವರನ್ನು ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ದೇಶದಲ್ಲಿ 2.55 ಲಕ್ಷ, ರಾಜ್ಯದಲ್ಲಿ 5995 ಗ್ರಾಮ ಪಂಚಾಯಿತಿಗಳು ಕಾರ್ಯನಿರ್ವಹಿಸುತ್ತಿದೆ. ಈ ಪೈಕಿ 16.77 ಲಕ್ಷ ಮಂದಿ ಪಂಚಾಯಿತಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಆರೋಗ್ಯವಿಮೆ ಲಭಿಸದೇ ತೀವ್ರ ಕಂ ಗಲಾಗಿದ್ದಾರೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿಗಳಲ್ಲಿ ಬಡವರ ಮಧ್ಯೆ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ನೀರುಗಂಟಿ, ಜಾಡ ಮಾಲಿ, ವಾಟರ್ ಮೆನ್, ಕಂಪ್ಯೂಟರ್ ಆಪರೇಟರ್, ಜವಾನ ಸೇರಿದಂತೆ 10 ಕ್ಕಿಂತ ಕಡಿಮೆ ಸಿಬ್ಬಂದಿಗಳಿರುವುದರಿ ಂದ ಆರೋಗ್ಯ ವಿಮೆಯಿಂದ ವಂಚಿತರಾಗಿ ಸಂಕಷ್ಟಪಡುತ್ತಿವೆ ಎಂದು ತಿಳಿಸಿದರು.
ಆ ನಿಟ್ಟಿನಲ್ಲಿ ಮಾನವೀಯ ನೆಲೆಯಲ್ಲಿ ಕೇಂದ್ರ ಸರಕಾರ ಎಲ್ಲಾ ರಾಜ್ಯಗಳಿಂದ ಮಾಹಿತಿಯೊಂದಿಗೆ ವರದಿ ಪಡೆದು ಪಂಚಾಯತ್ ಸಿಬ್ಬಂದಿಗಳಿಗೂ ಆರೋಗ್ಯವಿಮೆ ಸೌಲಭ್ಯ ನೀಡಿ ಬಡ ಸಿಬ್ಬಂದಿಗಳ ಕುಟುಂಬಕ್ಕೆ ನೆರವಾಗಬೇಕು ಎಂದು ಕೇಂದ್ರ ಸಚಿವರನ್ನು ಒತ್ತಾಯಿಸಿದರು. ಮನವಿ ಸ್ವೀಕರಿಸಿದ ಸಚಿವರು ಈ ಬಗ್ಗೆ ಅಗತ್ಯ ನಿ ರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
– ಸುರೇಶ್ ಎನ್.