ಚಿಕ್ಕಮಗಳೂರು, ಮೇ.09:– ತಾಲ್ಲೂಕಿನ ಹರಿಹರದಹಳ್ಳಿ ಗ್ರಾಮ ಪಂಚಾಯಿತಿಗೆ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಲಲಿತ ಮತ್ತು ಉಪಾಧ್ಯಕ್ಷರಾಗಿ ಹೆಚ್.ಎಂ.ಮಂಜೇಗೌಡ ಶುಕ್ರವಾರ ಅವಿರೋಧ ಆಯ್ಕೆಯಾದರು.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಲಲಿತ, ಮಂಜೇಗೌಡ ಹೊರತುಪಡಿಸಿ ಬೇರೆ ಯಾವ ಸದಸ್ಯರೂ ನಾಮಪತ್ರ ಸಲ್ಲಿಸದ ಕಾರಣ ಅಧಿಕೃತವಾಗಿ ಚುನಾವಣಾಧಿಕಾರಿ ಶಿವಕುಮಾರ್ ಘೋಷಿಸಿದರು.
ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ಎಲ್ಲ ಸದ ಸ್ಯರು ಒಂದಾಗಿ ಒಮ್ಮತದಿಂದ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಿರುವುದು ಉತ್ತಮ ಬೆಳವಣಿಗೆ. ನಿಮ್ಮ ಅವಧಿಯಲ್ಲಿ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತಾಗಲಿ. ಊರಿನ ಸಮಸ್ಯೆಗಳ ಬಗ್ಗೆ ಗಮನಹರಿಸಿ. ಅಭಿ ವೃದ್ಧಿಗೆ ಹೆಚ್ಚಿನ ಒತ್ತು ಕೊಡಿ ಎಂದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಮುಗುಳುವಳ್ಳಿ ನಿರಂಜನ್ ಮಾತನಾಡಿ ಗ್ರಾಮ ಪಂಚಾಯಿತಿ ಕಚೇರಿಗಳು ಗ್ರಾಮಸ್ಥರಿಗೆ ಸ್ಪಂದಿಸುವ ಕೇಂದ್ರಗಳಾಗಿದ್ದು, ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳದೇ ಸರ್ವಜನರಿ ಗೂ ಸಮಾನವಾದ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.
ನೂತನ ಅಧ್ಯಕ್ಷೆ ಲಲಿತ ಮಾತನಾಡಿ, ಗ್ರಾಮ ಪಂಚಾಯಿತಿ ಎಲ್ಲಾ ಸದಸ್ಯರು ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ದಿ ಕಾರ್ಯಗಳನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಣೇನಹಳ್ಳಿ ರಾಜು, ಅಂಬಳೆ ಹೋಬಳಿ ಶಕ್ತಿಕೇಂದ್ರ ಅಧ್ಯಕ್ಷ ಯೋಗೀಶ್, ಆಲ್ದೂರು ಮಂಡಲ ಪ್ರಧಾನ ಕಾರ್ಯದರ್ಶಿ ಕೃಷ್ಣೇಗೌಡ, ಮು ಖಂಡರು ಗಳಾದ ಕುರುವಂಗಿ ವೆಂಕಟೇಶ್, ಕಸಾಪ ಹೋಬಳಿ ಅಧ್ಯಕ್ಷ ಮಾಸ್ತೇಗೌಡ, ಗ್ರಾ.ಪಂ. ಸದಸ್ಯರಾದ ಸ್ವಪ್ನ, ಜಯಂತಿ, ಜೆ.ಎನ್.ಮಂಜೇಗೌಡ, ಯಶ್ವಂತರಾಜ್, ಕವಿತಾ, ಮುಳ್ಳೇಗೌಡ, ಶಾರದಮ್ಮ ಮತ್ತಿತರ ರಿದ್ದರು.
– ಸುರೇಶ್ ಎನ್.
–