ಚಿಕ್ಕಮಗಳೂರು: ಡಿಸೆಂಬರ್ 28 ರಂದು ವಿಧಾನ ಪರಿಷತ್ ಚುನಾವಣೆ ಮರು ಮತದಾನ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ನಡೆಯಲಿದ್ದು, ಈ ಸಂಬಂಧ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಭೆ ಸೇರಿ ಮರು ಮತದಾನ ಪ್ರಕ್ರಿಯೆ ಬಗ್ಗೆ ಚರ್ಚಿಸಿದರು.
ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಯಾಗಿದ್ದ ಎ.ವಿ.ಗಾಯತ್ರಿ ಶಾಂತೇಗೌಡ ಮರು ಮತದಾನದ ಬಗ್ಗೆ ವಿವರಿಸಿ ಮಾತನಾಡಿ, ನ್ಯಾಯಾಲಯದ ಅಂತಿಮ ತೀರ್ಪು ಮಾರ್ಚ್ ೦4 ರಂದು ಬರುವ ತನಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತಾಳ್ಮೆಯಿಂದ ಇರಬೇಕೆಂದು ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಭದ್ರಾ ಕಾಡಾ ನಿಗಮದ ಅಧ್ಯಕ್ಷರೂ ಆದ ಡಾ.ಕೆ.ಪಿ.ಅಂಶುಮAತ್ ಮಾತನಾಡಿ, ವಿಧಾನ ಪರಿಷತ್ ಮರು ಮತದಾನದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯಾದ ಗಾಯತ್ರಿ ಶಾಂತೇಗೌಡ ಅವರ ಗೆಲುವು ಆಗುವರೆಂದು ಆಶಾ ಭಾವನೆ ವ್ಯಕ್ತಪಡಿಸಿದರು.
ಶಾಸಕ ಹೆಚ್.ಡಿ.ತಮ್ಮಯ್ಯ ಮಾತನಾಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಡಿಸೆಂಬರ್ ೨೮ ರಂದು ನಡೆಯಲಿರುವ ಮರು ಮತದಾನದಲ್ಲಿ ಗಾಯತ್ರಿ ಶಾಂತೇಗೌಡ ಅವರು ಜಯಶೀಲರಾಗಲಿದ್ದು, ನಮ್ಮ ಜಿಲ್ಲೆಗೆ ಹೆಚ್ಚಿನ ಶಕ್ತಿ ಬರಲಿದ್ದು, ಎಲ್ಲರೂ ಸಹನೆಯಿಂದ ಇರಬೇಕೆಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಂ.ಸಿ.ಶಿವಾನAದಸ್ವಾಮಿ ಮಾತನಾಡಿ, ಮಾರ್ಚ್ ೦4 ರಂದು ಅಂತಿಮ ತೀರ್ಪು ಬರುವವರೆಗೂ ಕಾರ್ಯಕರ್ತರು ಶಾಂತಚಿತ್ತದಿAದ ಇರುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಲ್.ಮೂರ್ತಿ, ಡಾ.ಡಿ.ಎಲ್.ವಿಜಯಕುಮಾರ್, ರೇಖಾ ಹುಲಿಯಪ್ಪಗೌಡ, ಕೆಫೆಕ್ಸ್ ನಿಗಮ ಅಧ್ಯಕ್ಷ ಬಿ.ಹೆ.ಹರೀಶ್, ಸಿಡಿಎ ಅಧ್ಯಕ್ಷ ನಯಾಜ್ ಅಹಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್ ಕುಮಾರ್ ನಾಯ್ಡು, ನಗರಸಭಾ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು, ನಾಮಿನಿ ಸದಸ್ಯರುಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.