ಚಿಕ್ಕಮಗಳೂರು-ಮಾದಕ-ವಸ್ತುಗಳು-ಆರೋಗ್ಯಕ್ಕೆ-ಮಾದಕ-ಪೊಲೀಸ್- ಇಲಾಖೆ-ಪೊಲೀಸ್-ಇನ್ಸ್‌ಪೆಕ್ಟರ್-ಎನ್.ವೀರೆಂದ್ರ


ಚಿಕ್ಕಮಗಳೂರು – ಸ್ನೇಹಿತರ ಒತ್ತಾಯಕ್ಕೊ ಅಥವಾ ಒತ್ತಡಕ್ಕೆ ಮಣಿದು ಮಾದಕ ವಸ್ತುಗಳನ್ನು ಸೇವಿಸಿದರೆ ಅದು ಮುಂದೆ ವ್ಯಸನವಾಗಿ ವಿವಿಧ ರೀತಿಯ ಮಾನಸಿಕ ಮತ್ತು ದೈಹಿಕ ಖಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಅಜ್ಜಂಪುರ ಪೊಲೀಸ್ ಇಲಾಖೆ ಪೊಲೀಸ್ ಇನ್ಸ್‌ಪೆಕ್ಟರ್ ಎನ್. ವೀರೆಂದ್ರ ಹೇಳಿದರು.


ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಕ್ಕಮಗಳೂರು ವತಿಯಿಂದ ಇಂದು ಅಂತರಗಟ್ಟೆ ದುರ್ಗಾಂಭ ಪ್ರೌಢಶಾಲೆಯಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಗೀತೆಗಳ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಖಂಜರ ನುಡಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.


ಯುವ ಜನತೆ ಈ ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳನ್ನು ಅರಿತು ದೂರವಿರಬೇಕು. ಧೂಮಪಾನ ಮದ್ಯಪಾನದಿಂದ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಯುವ ಪೀಳಿಗೆ ಇಂತಹ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ನಶೆಯಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಪ್ರತಿಯೊಬ್ಬರು ಮಾದಕ ವಸ್ತು ಸೇವನೆಯಿಂದ ದೂರ ಉಳಿಯುವ ಸಂಕಲ್ಪ ಮಾಡಬೇಕು ಎಂದರು. ಅವರು ಪ್ರತಿಯೊಂದು ಮಾದಕ ವಸ್ತುಗಳ ಆರೋಗ್ಯಕ್ಕೆ ಹಾನಿಕಾರಕ ಎಂದು ಬರೆಯಲಾಗಿದೆ.

ಆದರೂ ಕೂಡ ಅವರನ್ನು ಲೆಕ್ಕಿಸದೆ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿರುವುದನ್ನು ಕಾಣುತ್ತೇವೆ ಎಂದು ತಿಳಿಸಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ವಿಜಯಕುಮಾರ್ ಮಾತನಾಡಿ ಇಂದಿನ ದಿನಗಳಲ್ಲಿ ಪ್ರಮುಖವಾಗಿ ಸಮಾಜವನ್ನು ಕಾಡುತ್ತಿರುವ ಪಿಡುಗುಗಳಲ್ಲಿ ಮಾದಕ ವಸ್ತು ಸಹ ಒಂದಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿ, ವಿದ್ಯಾರ್ಥಿಗಳು ಇಂತಹ ದುಶ್ಚಟಗಳಿಂದ ದೂರವಿದ್ದು, ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ವ್ಯಾಸಂಗದ ಕಡೆ ಆಸಕ್ತಿವಹಿಸುವಂತೆ ಹೇಳಿದರು.


ಅಜ್ಜಂಪುರ ತಾಲ್ಲೂಕಿನ ಕಾಟಿಗನೆರೆಯ ಆರ್.ಸಿ.ಆರ್.ಡಿ.ಎಸ್ ಕಲಾತಂಡದ ಲೋಕೇಶ ಮತ್ತು ತಂಡದವರಿಂದ ಬೀದಿ ನಾಟಕ ಮತ್ತು ಜಾನಪದ ಸಂಗೀತದ ಮೂಲಕ ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಓಂಕಾರ ಮೂರ್ತಿ, ಶಾಲೆಯ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

× How can I help you?