ಚಿಕ್ಕಮಗಳೂರು, ಮೇ.06:– ತಾಲ್ಲೂಕಿನ ಕಳಸಾಪುರ ಗ್ರಾಮದ ವಿನಾಯಕ ಪ್ರೌಢಶಾಲೆಗೆ ಈ ಬಾರಿ ಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.75 ರಷ್ಟು ಫಲಿತಾಂಶ ಲಭಿಸಿದ್ದು, ಮೂವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಶಾಲೆಯ ಕಾರ್ಯದರ್ಶಿ ಡಿ.ಕೆ.ಚಂದ್ರೇಗೌಡ ತಿಳಿಸಿದ್ದಾರೆ.
ದೇವಗೊಂಡನಹಳ್ಳಿ ಗ್ರಾಮದ ವಿದ್ಯಾರ್ಥಿನಿ ಸುಮ 593 ಅಂಕ, ಕಳಸಾಪುರದ ಕೆ.ಕೆ.ಬಿಂದುಶ್ರೀ 517 ಮತ್ತು ಗಾಳಿಹಳ್ಳಿಯ ಕು.ತನುಜ 504 ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಒಟ್ಟು ಪರೀಕ್ಷೆಯಲ್ಲಿ 24 ವಿದ್ಯಾರ್ಥಿಗಳು ಹಾಜರಾಗಿದ್ದು ಈ ಪೈಕಿ 18 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಮೂವರು ಉನ್ನತ ಶ್ರೇಣಿ ತೇರ್ಗಡೆ ಹೊಂದಿದ್ದಾರೆ.

ಶಾಲೆಯ ಮುಖ್ಯಶಿಕ್ಷಕರು, ಸಹಶಿಕ್ಷಕರು, ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರು, ಕಾರ್ಯದರ್ಶಿ ಹಾ ಗೂ ಎಲ್ಲಾ ಸದಸ್ಯರು ಸಂತೋಷ ವ್ಯಕ್ತಪಡಿಸಿದ್ದಾರೆ.
– ಸುರೇಶ್ ಎನ್.