ಚಿಕ್ಕಮಗಳೂರು-ರಾಜ್ಯಾದ್ಯಂತ-ಬುದ್ಧ-ಜಯಂತಿ-ಆಚರಣೆ- ಸ್ವಾಗತಾರ್ಹ

ಚಿಕ್ಕಮಗಳೂರು– ಭಾರತದ ಮೂಲನಿವಾಸಿ ಶೋಷಿತ ಸಮುದಾಯಗಳ ಆಶೋತ್ತರಗಳನ್ನು ಈಡೇರಿಸುವಲ್ಲಿ ಕಾಂಗ್ರೆಸ್ ಸರ್ಕಾರ ಬುದ್ಧ ಜಯಂತಿಯನ್ನು ರಾಜ್ಯಾದ್ಯಂತ ಆಚರಣೆ ಮಾಡಲು ತೀರ್ಮಾನಿಸಿ ಆದೇಶ ಮಾಡಿರುವುದನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ ಸ್ವಾಗತಿಸಿದ್ದಾರೆ.

ಅವರು ಶುಕ್ರವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿ, ಜಗತ್ತಿನ ಅಗ್ರಮಾನ್ಯ ದಾರ್ಶನಿಕ ವ್ಯಕ್ತಿ ಭಗವಾನ್ ಬುದ್ಧರನ್ನು ಬುದ್ಧ ಪೂರ್ಣಿವi ದಿನದಂದು ಸ್ಮರಿಸುವ ಅವಕಾಶವನ್ನು ಕಲ್ಪಿಸಿಕೊಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಅನುಸರಿಸಿದ ಧಮ್ಮ ಮಾರ್ಗದ ಮೂಲಕ ಶೋಷಿತರು ಬುದ್ಧರ ವೈಚಾರಿಕ, ವೈಜ್ಞಾನಿಕ ಮಾರ್ಗದಲ್ಲಿ ನಡೆದು ಮಧ್ಯಮ ಮಾರ್ಗದ ಬದುಕನ್ನು ಕಟ್ಟಿಕೊಂಡು ಮೌಢ್ಯತೆಯಿಂದ ಮುಕ್ತರಾಗಿ ಸಾಮಾಜಿಕ ಪರಿವರ್ತನೆಯ ಹಾದಿಯಲ್ಲಿ ನಡೆದಾಗ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಕನಸನ್ನು ನನಸು ಮಾಡಬಹುದು ಎಂದು ತಿಳಿಸಿದ್ದಾರೆ.

ಈ ಹಿಂದೆ ಮಹಾವೀರ, ಕನಕದಾಸರು ಸೇರಿದಂತೆ ಮಹಾತ್ಮ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಅವುಗಳ ಆಚರಣೆಯನ್ನು ಜಾರಿಗೆ ತಂದಿದ್ದು, ಏಷ್ಯಾದ ಹಲಾವರು ರಾಷ್ಟçಗಳು ಬುದ್ಧ ಜಯಂತಿಯನ್ನು ರಾಷ್ಟ್ರೀಯ ಹಬ್ಬವಾಗಿ ವೈಭವದಿಂದ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ.

ವಿಶ್ವದ ಪ್ರಥಮ ಹಾಗೂ ಶ್ರೇಷ್ಠ ದಾರ್ಶನಿಕರಾದ ಭಗವಾನ್ ಬುದ್ಧರ ಜಯಂತಿಯನ್ನು ಅವರು ಜನಿಸಿದ ಭಾರತದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಆಚರಿಸುವುದು ಸೂಕ್ತ ಎಂದು ಮನಗಂಡು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಲುವು ಒಳ್ಳೆಯ ನಿರ್ಧಾರವಾಗಿದೆ ಎಂದು ಹೇಳಿದ್ದಾರೆ.


Leave a Reply

Your email address will not be published. Required fields are marked *

× How can I help you?