ಚಿಕ್ಕಮಗಳೂರು-ರಾಜ್ಯ ಯುವಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಿ.ಎನ್.ಆದಿಲ್ ಅವರು ಸುಮಾರು 16347 ಮತಗಳನ್ನು ಪಡೆದುಕೊಂಡಿದ್ದಾರೆ. ಒಟ್ಟಾರೆ ಅತ್ಯಧಿಕ ಮತಗಳನ್ನು ಪಡೆದು 11ನೇ ಸ್ಥಾನ ಗಳಿಸಿದ ಪರಿಣಾಮ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಕಳೆದ 2006 ರಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ತೊಡಗಿಸಿಕೊಂಡು ಎನ್‌ಎಸ್ ಯುಐ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಐಡಿಎಸ್‌ಜಿ ಕಾ ಲೇಜು ಸಮಿತಿ ಸದಸ್ಯರಾಗಿದ್ದು, ಒಂಬತ್ತು ವರ್ಷಗಳಿಂದ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ.