ಚಿಕ್ಕಮಗಳೂರು-ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು  ಯಶಸ್ವಿಯಾಗಿ  ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್ ಕೀರ್ತನಾ ಸೂಚನೆ

ಚಿಕ್ಕಮಗಳೂರು– ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಸಮೀಕ್ಷೆ ನಡೆಸುವ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ಸಮೀಕ್ಷೆ ನಡೆಸಲು ಈಗಾಗಲೇ ರಚಿಸಿರುವ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯು ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು  ಯಶಸ್ವಿಯಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್ ಕೀರ್ತನಾ ನಿರ್ದೇಶನ ನೀಡಿದರು.

ಏ. 22 ರಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್, ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ಸಮೀಕ್ಷೆ ನಡೆಸುವ ಸಂಬಂಧ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲ್ಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿಯನ್ನು ರಚಿಸಲಾಗಿದ್ದು ತಾಲ್ಲೂಕಿನ ತಹಸೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಇತರ ಅಧಿಕಾರಿಗಳು.
ಸದಸ್ಯರಾಗಿರುತ್ತಾರೆ. ಸಮೀಕ್ಷೆಯ ಮೇಲ್ವೆಚಾರಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರನ್ನು ನಿಯೋಜಿಸಲು ಉಪನಿರ್ದೇಶಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರವರು ಕ್ರಮವಹಿಸಲು ತಿಳಿಸಲಾಯಿತು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲ್ಲೂಕು ನೋಡಲ್ ಅಧಿಕಾರಿಗಳು ಸಮೀಕ್ಷೆಯ ಸಂಪೂರ್ಣ ಮೇಲುಸ್ತುವಾರಿ ವಹಿಸಲು ಸೂಚಿಸಲಾಯಿತು.

ಕುಟುಂಬ ದತ್ತಾಂಶದ ಪ್ರಕಾರ ಗ್ರಾಮ ಹಾಗೂ ನಗರಗಳಲ್ಲಿನ ಕುಟುಂಬವಾರು ಸಂಖ್ಯೆಗಳನ್ನುBreakup ಮಾಡಿ, ತಾಲ್ಲೂಕುಗಳಿಗೆ ಗ್ರಾಮ ಪಂಚಾಯಿತಿವಾರು/ಗ್ರಾಮವಾರು/ವಾರ್ಡವಾರು Password/Login ಮೂಲಕ ಮಾಹಿತಿ ಒದಗಿಸಲಾಗುವುದು. ಅದರಂತೆ HRMS ನಿಂದ ಶಿಕ್ಷಕರನ್ನು Mappin ಮಾಡಿಕೊಂಡು ಸಮೀಕ್ಷಾ ಕಾರ್ಯ ಕೈಗೊಳ್ಳಲು ತಿಳಿಸಲಾಯಿತು.

ಚಿಕ್ಕಮಗಳೂರು ಜಿಲ್ಲೆಯಲ್ಲಿ 2.53.651 ಪರಿಶಿಷ್ಟ ಜಾತಿಯ ಜನಸಂಖ್ಯೆ ಇದ್ದು, ಇವರ ಸಮೀಕ್ಷೆ ನಡೆಸಲು ಸುಮಾರು 600 ರಿಂದ 700 ಶಿಕ್ಷಕರ ಅವಶ್ಯಕತೆ ಇದ್ದು. ಸದರಿ ಶಿಕ್ಷಕರಿಗೆ ಸಹಾಯಕರಾಗಿ ಅಲ್ಲಿನ ಅಂಗನವಾಡಿ ಕಾರ್ಯಕಾರ್ತೆಯರನ್ನು ನಿಯೋಜಿಸುವ ಕುರಿತು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರವರಿಗೆ ತಿಳಿಸಿ. ಸರ್ಕಾರದಿಂದ ಕಾಲಕಾಲಕ್ಕೆ ನೀಡುವ ನಿರ್ದೇಶನ ಹಾಗೂ ಮಾರ್ಗಸೂಚಿಗಳನ್ವಯ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಿ ಸಮೀಕ್ಷೆ ಕಾರ್ಯ ಯಶಸ್ವಿ ಆಗುವಂತೆ ಕ್ರಮವಹಿಸಲು ಹೇಳಿದರು.

ಈ ವೇಳೆ  ವಿವಿಧ ಇಲಾಖೆ  ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

× How can I help you?