ಚಿಕ್ಕಮಗಳೂರು– ರಾಜ್ಯದ ಭವಿಷ್ಯವನ್ನು ರೂಪಿಸುವ ಯುವಜನರಿಗೆ ಹೆಚ್ಚಿನ ಆದ್ಯತೆ ನೀಡದೇ ಮಂಡಿಸಿರುವ ಸಿದ್ದರಾಮಯ್ಯ ಬಜೆಟ್ ಯುವಜನ ವಿರೋಧಿಯಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಹೇಳಿದ್ದಾರೆ.
ಈ ಬಾರಿ ರಾಜ್ಯಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಯುವ ಜನರನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಅನುಧಾನವನ್ನು ಮೀಸಲಿಡಬೇಕಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಯುವ ಜನರನ್ನು ನೇರವಾಗಿ ತಿರಸ್ಕರಿಸುವ ಮೂಲಕ ಯುವಜನ ವಿರೋಧಿ ಎನ್ನುವುದನ್ನು ಸಾಬೀತು ಪಡಿಸಿದ್ದಾರೆ.
ಯುವ ಸಭಾಲೀಕರಣ ಮತ್ತು ಕ್ರೀಡಾ ಇಲಾಖೆ ಮೂಲಕ ಯುವಜನರ ಚಟುವಟಿಕೆಗಳಿಗೆ ಹೆಚ್ಚಿನ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಬೇಕೆಂಬ ಕೂಗು ರಾಜ್ಯದ ಎಲ್ಲೆಡೆ ಯುವಜನರಿಂದ ಕೇಳಿ ಬಂದಿತ್ತು. ಆದರೆ ಸಿದ್ದರಾಮಯ್ಯ ರಾಜಧಾನಿಯನ್ನು ಸೀಮಿತವಾಗಿಸಿಕೊಂಡು ಕ್ರೀಡಾಂಗಣ ನಿರ್ಮಾಣಕಷ್ಟೇ ಭರವಸೆ ನೀಡಿರುವುದು ಖಂಡನೀಯ ಎಂದಿದ್ದಾರೆ.
- ಸುರೇಶ್ ಎನ್.