ಚಿಕ್ಕಮಗಳೂರು, ಮೇ.9: ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2025-26ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷದ ಡಿಪ್ಲೊಮಾ (ಡಿಹೆಚ್‌ಟಿಟಿ) ಕೋರ್ಸ್ ಕಲಿಕೆಗಾಗಿ 39 ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಹರಾಗಿದ್ದು, ಬರುವ ಜುಲೈ 1ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.
ಅರ್ಜಿಗಳನ್ನು ಆನ್‌ಲೈನ್‌ನಲ್ಲಿ (https://khtigadag.ac.in/AdmissionForm.pdf) ಅನ್ನು ಬಳಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜೂನ್ 15ರೊಳಗೆ ಸಲ್ಲಿಸಲು ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡದಲ್ಲಿರುವ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ (08262-295880) ಅಥವಾ ಗದಗ-ಬೆಟಗೇರಿ ನರಸಾಪುರದಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ ಪ್ರಾಂಶುಪಾಲರನ್ನು (ದೂರವಾಣಿ ಸಂಖ್ಯೆ 08372-297221, 9449162822) ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.