ಚಿಕ್ಕಮಗಳೂರು, ಮೇ.04:- ಜಿಲ್ಲಾ ನ್ಯಾಯಾಲಯದಿಂದ ವರ್ಗಾವಣೆಗೊಂಡ ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಕೃಷ್ಣ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಮಂಜು ಹಾಗೂ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹರೀಶ್‌ಗೆ ಶನಿವಾರ ಚಿಕ್ಕಮಗಳೂರು ವಕೀಲರ ಸಂಘದಿಂದ ಆತ್ಮೀ ಯವಾಗಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗ್ಡೆ, ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಸುಜೇಂದ್ರ, ಉಪಾಧ್ಯಕ್ಷ ಕೆ.ಎಸ್.ಶರತ್‌ಚಂದ್ರ, ಕಾರ್ಯದರ್ಶಿ ಅನಿಲ್, ಖಜಾಂಚಿ ದೀಪಕ್, ಸಹ ಕಾರ್ಯದರ್ಶಿ ಪ್ರಿಯದರ್ಶಿನಿ, ಕಾರ್ಯಕಾರಿ ಮಂಡಳಿ, ವಕೀಲರುಗಳು ಉಪಸ್ಥಿತರಿದ್ದರು.
- ಸುರೇಶ್ ಎನ್.