ಚಿಕ್ಕಮಗಳೂರು– ರಾಷ್ಟ್ರ ಮಟ್ಟದ ಎಐಸಿಸಿ ಅಂಗವಾದ ಜವಾಹರ್ ಬಾಲ್ ಮಂಚ್ ವತಿಯಿಂದ ಫೆ.22 ಮತ್ತು 23 ರಂದು ಎರಡು ದಿನಗಳ ರಾಷ್ಟ್ರ ಮಟ್ಟದ ಜವಾಹರ್ ಬಾಲ್ ಮಂಚ್‌ನ ಸಮಾವೇಶ ಬೆಂಗಳೂರಿನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಜವಾಹರ್ ಬಾಲ್ ಮಂಚ್ ಜಿಲ್ಲಾಧ್ಯಕ್ಷ ಪರಮೇಶ್ ರಾಜ್ ಅರಸ್ ಹಾಗೂ ರಾಜ್ಯ ಸಂಚಾಲಕ ಸಿ.ಜೆ.ಮಂಜುನಾಥ್ ತಿಳಿಸಿದ್ದಾರೆ.
ಅವರು ಇಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿ, ಎರಡು ದಿನಗಳ ರಾಷ್ಟ್ರ ಮಟ್ಟದ ಸಮಾವೇಶದ ಅಧ್ಯಕ್ಷತೆಯನ್ನು ಕೆಪಿಸಿಸಿ ಜವಾಹರ್ ಬಾಲ್ ಮಂಚ್ ರಾಜ್ಯಾಧ್ಯಕ್ಷ ಹೆಚ್.ಜೆ.ಮೈನುದ್ದೀನ್ ವಹಿಸಲಿದ್ದು, ೨೫ ಕ್ಕೂ ಹೆಚ್ಚು ರಾಜ್ಯದ ರಾಜ್ಯಾಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ರಾಷ್ಟ್ರೀಯ ಪದಾಧಿಕಾರಿಗಳು ಸೇರಿದಂತೆ ಸುಮಾರು 4೦೦ ಜನ ಭಾಗವಹಿಸಲಿದ್ದಾರೆ.
ಸಮಾವೇಶಕ್ಕೆ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ಪ್ರಿಯಾಂಕ ಗಾಂಧಿ, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜವಾಹರ್ ಬಾಲ್ ಮಂಚ್ ರಾಷ್ಟ್ರೀಯ ಅಧ್ಯಕ್ಷ ಜಿ.ವಿ. ಹರಿ, ಸಚಿವರಾದ ಪ್ರಿಯಾಂಕ ಖರ್ಗೆ, ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಪ್ರಭಾ ಮಲ್ಲಿಕಾರ್ಜುನ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಚಿಬ್, ಮಾಜಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಉಸ್ತುವಾರಿ ಕೃಷ್ಣ ಅಲ್ಲವಾರು, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಸೇರಿದಂತೆ ಅನೇಕ ಸಚಿವರು, ಗಣ್ಯರು ರಾಷ್ಟ್ರೀಯ ಮಟ್ಟದ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.