ಚಿಕ್ಕಮಗಳೂರು-ಶ್ರೀ ಸುಬ್ರಮಣ್ಯ ಭಾರತಿ ಮಹಾಸಭಾ (ರಿ) ತಮಿಳು ಸಂಘದಿoದ ಡಿ.26 ರಂದು ನಗರದ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 11.30ಕ್ಕೆ ದ್ರಾವಿಡ ಸಂಸ್ಕೃತಿ ಸಮ್ಮಿಲನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ತಾಲ್ಲೂಕು ಕಚೇರಿಯಿಂದ ಅಂಬೇಡ್ಕರ್ ಸಮುದಾಯ ಭವನದವರೆಗೆ ನೂರಾರು ಸಂಖ್ಯೆಯಲ್ಲಿ ಸಮುದಾಯ ಬಾಂಧವರು ಮೆರವಣಿಗೆ ಜಾಥಾ ನಡೆಸಲಿದ್ದಾರೆ.
ಕಾರ್ಯಕ್ರಮವನ್ನು ಶಾಸಕ ಹೆಚ್.ಡಿ.ತಮ್ಮಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್.ಬೋಜೇಗೌಡ, ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ, ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್, ನಗರಸಭಾ ಅಧ್ಯಕ್ಷೆ ಸುಜಾತ ಶಿವಕುಮಾರ್ ಮತ್ತಿತರರು ಭಾಗವಹಿಸಲಿದ್ದು ಶ್ರೀ ಸುಬ್ರಮಣ್ಯ ಭಾರತಿ ಮಹಾಸಭಾದ ಅಧ್ಯಕ್ಷ ಜಿ.ರಘು ಅಧ್ಯಕ್ಷತೆ ವಹಿಸಲಿದ್ದಾರೆ.
————-ಸುರೇಶ್