ಚಿಕ್ಕಮಗಳೂರು-ಆಟೋ ಕಪ್ -2024 ಕ್ರಿಕೆಟ್ ಪಂದ್ಯಾವಳಿ-ಒತ್ತಡ ನಿಯಂತ್ರಿಸಲು ಕ್ರೀಡಾಚಟುವಟಿಕೆ ಸಹಕಾರಿ-ಬಾಬುದ್ದೀನ್

ಚಿಕ್ಕಮಗಳೂರು-ಆಟೋ ಚಾಲಕರು ದೈನಂದಿನ ವೃತ್ತಿ ಬದುಕಿನಲ್ಲಿ ಒತ್ತಡ ನಿಯಂತ್ರಿಸಲು ಕ್ರೀಡಾಚಟುವಟಿಕೆಯಲ್ಲಿ ಪಾಲ್ಗೊಂಡರೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಂಡು ಬದುಕನ್ನು ಸುಲಲಿತವಾಗಿಸಲು ಸಾಧ್ಯ ಎಂದು ಬಸವನಹಳ್ಳಿ ಠಾಣೆ ಪೊಲೀಸ್ ಉಪನಿರೀಕ್ಷಕ ಬಾಬುದ್ದೀನ್ ಹೇಳಿದರು.

ನಗರದ ದೀಪಾ ನರ್ಸಿಂಗ್ ಹೋಂ ಸಮೀಪ ಪಟಾಕಿ ಮೈದಾನದಲ್ಲಿ ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದಿoದ 69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿದ್ಧ ಆಟೋ ಕಪ್ -2024 ಕ್ರಿಕೇಟ್ ಪಂದ್ಯಾವಳಿಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

ಹಗಲು-ರಾತ್ರಿ ಎನ್ನದೆ ಸಾರ್ವಜನಿಕವಾಗಿ ದುಡಿಯುವ ಆಟೋ ಚಾಲಕರಿಗೆ ಸಂಘದಿoದ ಕ್ರಿಕೇಟ್ ಪಂದ್ಯಾವಳಿ ಆಯೋಜಿಸಿ ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದ ಅವರು ಪರಸ್ಪರ ವೈಮನಸ್ಸನ್ನು ದೂರವಿರಿಸಿ ಸ್ನೇಹದಿಂದ ಪಂದ್ಯಾವಳಿಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ದೈಹಿಕ ಚಟುವಟಿಕೆಯ ಮುಂದುವರಿದ ಭಾಗವೇ ಕ್ರೀಡೆ, ಪ್ರತಿಯೊಬ್ಬರೂ ಕ್ರೀಡೆಯ ಬಗ್ಗೆ ಆಸಕ್ತಿ ಹಾಗೂ ಮಹತ್ವವನ್ನು ಅರಿತುಕೊಳ್ಳಬೇಕಾದ ಅಗತ್ಯವಿದೆ ಎಂದ ಅವರು ಇಂದಿನ ಯುವಜನತೆಯು ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಶಕ್ತರಾಗಬೇಕು ಎಂದು ತಿಳಿಸಿದರು.

ಕನ್ನಡಪರ ಹೋರಾಟಗಾರ ಕೃಷ್ಣಮೂರ್ತಿ ಮಾತನಾಡಿ, ಕ್ರೀಡೆ ಹಾಗೂ ದೈಹಿಕ ವ್ಯಾಯಾಮ ಪ್ರತಿಯೊಬ್ಬರ ಅವಿಭಾಜ್ಯ ಅಂಗವಾಗಬೇಕು. ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ದೈನಂದಿನ ಕ್ರೀಡಾಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಅನಾರೋಗ್ಯವು ಸಮೀಪವು ಸುಳಿಯುವುದಿಲ್ಲ ಎಂದು ಹೇಳಿದರು.

ನಗರ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಕಾರ್ಯದರ್ಶಿ ಜಗದೀಶ್ ಕೋಟೆ ಮಾತನಾಡಿ, ಪ್ರಸ್ತುತ ಕ್ರಿಕೇಟ್ ಪಂದ್ಯಾವಳಿಯಲ್ಲಿ ಆರು ಆಟೋ ಚಾಲಕರ ತಂಡವು ನೊಂದಾಯಿಸಿದೆ. 6 ಓವರ್‌ನ ಪಂದ್ಯಾವಳಿ ಇದಾಗಿದ್ದು ವಿಜೇತರಾದ ಪ್ರಥಮ ಹಾಗೂ ದ್ವಿತೀಯ ತಂಡಕ್ಕೆ ನಗದು ಹಾಗೂ ಪಾರಿತೋಷಕ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.

ಪಂದ್ಯಾವಳಿ ಕಾರ್ಯಕ್ರಮದಲ್ಲಿ ಸಂಚಾರಿ ಪೊಲೀಸ್‌ಠಾಣೆ ಉಪನಿರೀಕ್ಷಕ ಧನಂಜಯ್, ನಗರಸಭಾ ಸದಸ್ಯ ಅರುಣ್, ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಉದಯ್‌ಕುಮಾರ್, ನಗರಾ ಧ್ಯಕ್ಷ ರಾಮೇಗೌಡ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಮಾಜಿ ಅಧ್ಯಕ್ಷರಾದ ನಟರಾಜ್ ಕೋಟೆ, ಮಂ ಜುನಾಥ್ ಮಿಲ್ಟ್ರಿ , ಮುಖಂಡ ದಂಟರಮಕ್ಕಿ ಮಂಜುನಾಥ್, ಆಟೋ ಚಾಲಕರಾದ ಯಶ್ವಂತ್, ಈಶ್ವರ್, ಅಶ್ವಥ್, ರಾಜು ಮತ್ತಿತರರಿದ್ದರು.

———–ಸುರೇಶ್

Leave a Reply

Your email address will not be published. Required fields are marked *

× How can I help you?