ಚಿಕ್ಕಮಗಳೂರು-ಸಿಹಿಹಂಚಿ,ಪಟಾಕಿ ಸಿಡಿಸಿ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸಿದ ದಲಿತ ಸಂಘರ್ಷ ಸಮಿತಿ

ಚಿಕ್ಕಮಗಳೂರು-ಭೀಮಾ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ ದಲಿತ ಸಂಘರ್ಷ ಸಮಿತಿ ಹಾಗೂ ಸಮಾನ ಮನಸ್ಕರರ ಮುಖಂಡರುಗಳು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಕೇಕ್ ಕತ್ತರಿಸಿ ಹಾಗೂ ಪಟಾಕಿ ಸಿಡಿಸುವ ಮುಖಾಂತರ ವಿಜಯೋತ್ಸವ ಅತ್ಯಂತ ಸಂಭ್ರಮದಿoದ ಆಚರಿಸಿದರು.

ಬಳೀಕ ಮಾತನಾಡಿದ ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಮತ್ತು ಪೇಶ್ವೆಗಳ ನಡುವೆ ಭೀಮಾ ಕೋರೆಗಾಂವ್ ನಲ್ಲಿ ಜನವರಿ 1, 1818ರಲ್ಲಿ ನಡೆದ ಐತಿಹಾಸಿಕ ಯುದ್ದದಲ್ಲಿ ಐನೂರು ಮಂದಿ ದಲಿತ ಹೋರಾಟಗಾರರು ಆಹಾರ, ನೀರು ಹಾಗೂ ವಿಶ್ರಾಂತಿಯಿಲ್ಲದೆ ಸಾವಿರಾರು ಮಂದಿಯ ಸೈನ್ಯದ ವಿರುದ್ಧ ಕಾದಾಡಿದ ಕ್ಷಣವು ಎಲ್ಲರಿಗೂ ಸ್ಪೂರ್ತಿದಾಯಕ ಎಂದರು.

ಪರಿಶಿಷ್ಟರು, ಹಿಂದುಳಿದ ಮತ್ತು ಶೋಷಿತರ ಶೌರ್ಯದ ಸಂಕೇತವೇ ಭೀಮಾ ಕೋರೆಗಾಂವ್ ಯುದ್ಧವಾಗಿದೆ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲುಕೀಳುಗಳ ವಿರುದ್ಧ ನಿಂತು ಮಾನವೀಯ ವೌಲ್ಯಗಳನ್ನು ಪಡೆದುಕೊಳ್ಳಲು ಹಂಬಲಿಸುವ ಮಹಾರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟವಾಗಿದೆ ಎಂದು ಬಣ್ಣಿಸಿದರು.

ದಸoಸ ವಿಭಾಗೀಯ ಸಂಚಾಲಕ ಮರ್ಲೆ ಅಣ್ಣಯ್ಯ ಮಾತನಾಡಿ, ‘ಕೋರೆಗಾಂವ್ ಯುದ್ದದಲ್ಲಿ 30 ಸಾವಿರ ಪೇಶ್ವೆ ಸೈನಿಕರನ್ನು ಸೋಲಿಸಿದ 500 ಮಹಾರ್ ಸೈನಿಕರ ಪೈಕಿ 22 ಮಂದಿ ಸೈನಿಕರು ಮರಣ ಹೊಂದುತ್ತಾರೆ. ಅವರ ನೆನಪಿಗಾಗಿ ಭೀಮನದಿ ತೀರದಲ್ಲಿ ವಿಜಯಸ್ಥಂಭ ಸ್ಥಾಪಿಸಲಾಗಿದ್ದು, ಪ್ರತಿವರ್ಷ ಜ.01 ರಂದು ಕೋರೆಗಾಂವ್ ವಿಜಯೋತ್ಸವ ಆಚರಿಸುತ್ತಾರೆ ಎಂದರು.

ಈ ಸಂದರ್ಭದಲ್ಲಿ ದಸಂಸ ಮುಖಂಡರುಗಳಾದ ಬಾಲಕೃಷ್ಣ ಬಿಳೇಕಲ್ಲು, ಸಂತೋಷ್ ಲಕ್ಯಾ, ಹಿರೇ ಮಗಳೂರು ರಾಮಚಂದ್ರ, ಹರಿಯಪ್ಪ, ಜವರಯ್ಯ, ವೀರಭದ್ರಯ್ಯ, ಪಿ.ಪರಮೇಶ್ ಮತ್ತಿತರರಿದ್ದರು.

——–ಸುರೇಶ್

Leave a Reply

Your email address will not be published. Required fields are marked *

× How can I help you?