ಚಿಕ್ಕಮಗಳೂರು-ಜಾತಿ ಗಣತಿ ವರದಿ ಅಂಗೀಕಾರ-ದಲಿತ,ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ದ.ಸಂ.ಸ ಮನವಿ

ಚಿಕ್ಕಮಗಳೂರು-ಜಾತಿ ಗಣತಿ ವರದಿ ಅಂಗೀಕರಿಸಬೇಕು ಹಾಗೂ ದಲಿತ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರುಗಳು ಮಂಗಳವಾರ ಜಿಲ್ಲಾಡಳಿತ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂಬoಧ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ದಸಂಸ ಮುಖಂಡರುಗಳು ಮನವಿ ಸಲ್ಲಿಸಿ ಜಾತಿ ವರದಿ ಶೀಘ್ರವೇ ಅನುಷ್ಟಾನಗೊಳಿಸಿ, ದಲಿತರಿಗೆ ಶೇ.50 ರಿಂದ ಶೇ.75ಕ್ಕೆ ಮೀಸಲಾತಿ ಹೆಚ್ಚಳಗೊಳಿಸಬೇಕು ಎಂದು ಒತ್ತಾಯಿಸಿದರು.

ಬಳಿಕ ಮಾತನಾಡಿದ ದಸಂಸ ರಾಜ್ಯ ಸಂಘಟನಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್, ರಾಜ್ಯದ ಜನ ಸಂಖ್ಯೆಯ ಬಹು ಭಾಗವಾಗಿರುವ ಆದಿವಾಸಿ, ಅಲೆಮಾರಿ, ದಲಿತರು, ಹಿಂದುಳಿದ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಮುಂತಾದ ಶೋಷಿತ ಸಮುದಾಯಗಳು ಹಲವು ದಶಕಗಳಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ರೂಪಿಸಿಕೊಂಡು ಬಂದಿದೆ ಎಂದರು.

ಜಾತಿ ಕೇಂದ್ರಿತ ರಾಜಕಾರಣದಿಂದಾಗಿ ಈ ಜನಾಂಗವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಔದ್ಯೋಗಿಕ ಸ್ಥಿತಿಗಳನ್ನು ಉತ್ತಮಪಡಿಸುವ ಹೊಣೆಗಾರಿಕೆಯಿಂದ ನುಣುಚಿಕೊಂಡಿದೆ. ಇದರಿಂದ ಸಮಾಜ ದಲ್ಲಿ ಅಸಮಾನತೆಯ ಕಂದಕಗಳು ಮತ್ತಷ್ಟ್ಟು ಹೆಚ್ಚಳಗೊಳ್ಳುತ್ತಿದೆ ಎಂದು ದೂರಿದರು.

ಹೀಗಾಗಿ ಸಾಮಾಜಿಕ ನ್ಯಾಯದ ಗುರಿಗಳನ್ನು ತಲುಪಲು ಕಾಲ ಕಾಲಕ್ಕೆ ಜಾತಿ ಜನಗಣತಿಯ ನಿಖರ ವಿವರಗಳನ್ನು ಆಧರಿಸಿ ಮೀಸಲಾತಿ ಹೆಚ್ಚಳ ಹಾಗೂ ಇನ್ನಿತರ ಯೋಜನೆಗಳನ್ನು ರೂಪಿಸುವುದು ಅನಿವಾರ್ಯ.ಆ ನಿಟ್ಟಿನಲ್ಲಿ ಸರ್ಕಾರವು ಮುಂದಾಗುತ್ತಿರುವುದು ಅಭಿನಂದನಾರ್ಹ ಎಂದರು.

ಜಾತಿಗಣತಿ ವರದಿ ಸ್ವೀಕಾರಗೊಂಡ ಕೂಡಲೇ ಕೆಲವು ಪಟ್ಟಭದ್ರ ಜಾತಿವಾದಿ ವ್ಯಕ್ತಿ ಹಾಗೂ ರಾಜಕೀಯ ಪಕ್ಷಗಳು, ಸಂಘ-ಸoಸ್ಥೆಗಳು ತೀವ್ರ ಸಮಾಧಾನ ಹೊರಹಾಕಿ ವಿರೋಧ ವ್ಯಕ್ತಪಡಿಸುತ್ತಿರುವುದು ಕಳವಳಕಾರಿ.ಪಟ್ಟಭದ್ರ ಜಾತಿವಾದಿಗಳು ಜಾತಿಗಣತಿ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವುದು ದಸಂಸ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.

ಜಾತಿಗಣಪತಿ ವರದಿಯ ಅಂಕಿ-ಅoಶಗಳ ಪ್ರಕಾರ ಪ.ಜಾತಿ, ಪ.ವರ್ಗ ಹಾಗೂ ಇತರ ಹಿಂದುಳಿದ ವರ್ಗಗಳ ಪ್ರಸ್ತುತ ಶೇ.50 ರಷ್ಟು ಶೈಕ್ಷಣಿಕ, ಔದ್ಯೋಗಿಕ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ.75ಕ್ಕೆ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದರ ಮೂಲಕ ರಾಜ್ಯದ ಸಾಮಾಜಿಕ ನ್ಯಾಯದ ಪರಂಪರೆಯನ್ನು ಸರ್ಕಾರ ಎತ್ತಿಹಿಡಿದು ದೇಶಕ್ಕೆ ಮಾದರಿ ಆಡಳಿತ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದಸಂಸ ಮುಖಂಡರುಗಳಾದ ಚಿದಾನಂದ್, ಎಂ.ಎಸ್.ಪುಟ್ಟಸ್ವಾಮಿ, ಹರೀಶ್, ಈರೇಶ್, ವೆಂಕಟೇಶ್, ಮಲ್ಲೇಶ್, ಕಿರಣ್‌ಕುಮಾರ್ ಮತ್ತಿತರರಿದ್ದರು.

—————————————————–ಸುರೇಶ್

Leave a Reply

Your email address will not be published. Required fields are marked *

× How can I help you?