ಚಿಕ್ಕಮಗಳೂರು-ತಾಲ್ಲೂಕು ಕನ್ನಡ ಜಾನಪದ ಪರಿಷತ್ ಪದಗ್ರಹಣ ಹಾಗೂ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ನ.16 ರಂದು ಬೆಳಿಗ್ಗೆ 10.30ಕ್ಕೆ ಕೆಂಪನಹಳ್ಳಿ ಸಮೀಪದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಕಜಾಪ ಖಜಾಂಚಿ ಹೆಚ್.ಸಿ.ವಿಜಯ್ಕುಮಾರ್ ತಿಳಿಸಿದ್ದಾರೆ.
ಅಂದು ಕಜಾಪ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್.ಬಾಲಾಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶ ಕಿ ಡಾ.ಮಂಜುಳಾ ಹುಲ್ಲಹಳ್ಳಿ ಭಾಗವಹಿಸಲಿದ್ದು ಕಜಾಪ ಜಿಲ್ಲಾಧ್ಯಕ್ಷ ಓಣಿತೋಟ ರತ್ನಾಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲ್ಲೂಕು ಅಧ್ಯಕ್ಷರಾಗಿ ಅಶೋಕ್ ರಾಜರತ್ನಂ ಪದವಿ ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.