ಚಿಕ್ಕಮಗಳೂರು-ಪರಿಷತ್ ಸದಸ್ಯ ಸಿ.ಟಿ ರವಿ ಬಂಧನ ಖಂಡಿಸಿ ನಾಳೆ ಚಿಕ್ಕಮಗಳೂರು ನಗರ ಬಂದ್ ಗೆ ಜಿಲ್ಲಾ ಬಿಜೆಪಿ ಘಟಕ ಕರೆ ನೀಡಿದೆ.
ನಗರದ ಕಡೂರು ರಸ್ತೆಯ ಹನುಮಂತಪ್ಪ ವೃತ್ತದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು,ಮುಖಂಡರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತದನಂತರ ಸಿ.ಟಿ. ರವಿ ಮನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ನೇತೃತ್ವದಲ್ಲಿ ಸಭೆ ನಡೆಸಿದ ಮುಖಂಡರು ಮತ್ತು ಕಾರ್ಯಕರ್ತರು ನಾಳೆ ನಗರ ಬಂದ್ ಮಾಡಿ ಪ್ರತಿಭಟಿಸಲು ತೀರ್ಮಾನ ಕೈಗೊಂಡರು.
—————–—ಆಶ ಸಂತೋಷ್ ಅತ್ತಿಗೆರೆ