ಚಿಕ್ಕಮಗಳೂರು-ತಾಲ್ಲೂಕಿನ ಆರದವಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತಿಕೆರೆ ಕ್ಲಸ್ಟರ್ ಮಟ್ಟದ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಶಾಲಾಭಿವೃಧ್ದಿ ಸಮಿತಿ ಅಧ್ಯಕ್ಷೆ ಮೇಘನಾ ಉದ್ಘಾಟಿಸಿದರು.
ಮಕ್ಕಳಿಗೆ ವಿವಿಧ ಸ್ಫರ್ಧೆಗಳಲ್ಲಿ ಆಯೋಜಿಸುವ ಮೂಲಕ ಶಾಲಾಭಿವೃದ್ದಿ ಸಮಿತಿ, ದಸಂಸ ಹಾಗೂ ಗ್ರಾ.ಪಂ.ನಿoದ ಕಾರಂಜಿ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಹರಿಹರದಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಸ್ವಪ್ನ ಚಂದ್ರಶೇಖರ್, ಉಪಾಧ್ಯಕ್ಷ ಯಶ್ವಂತ್‌ರಾ ಜ್ ಅರಸ್, ದಸಂಸ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್, ಮಹಿಳಾ ಸಂಚಾಲಕಿ ಅರುಣಾಕ್ಷಿ, ತಾಲ್ಲೂಕು ಸಂಘಟನಾ ಸಂಚಾಲಕಿ ಶಿಲ್ಪಾ ರಮೇಶ್, ಶಾಲೆಯ ಮುಖ್ಯಶಿಕ್ಷಕ ಶಿವಕುಮಾರ್, ಸಮೂಹ ಸಂಪನ್ಮೂಲ ಇಲಾಖೆ ಅಧಿಕಾರಿ ಉಮೇಶ್ ಮತ್ತಿತರರು ಹಾಜರಿದ್ದರು.
——ಸುರೇಶ್