ಚಿಕ್ಕಮಗಳೂರು-ಪರಿಶಿಷ್ಟ ಜಾತಿ ಹಾಗೂ ಪಂಗಡದ ಮಕ್ಕಳಿಗೆ ಕಾಂಗ್ರೆಸ್ ನೇತೃತ್ವದ ರಾಜ್ಯಸರ್ಕಾರ ಉನ್ನತ ವಿದ್ಯಾಭ್ಯಾಸ ನಡೆಸಲು ಪ್ರೋತ್ಸಾಹಧನ ಹೆಚ್ಚಳಗೊಳಿಸಿರುವುದು ಸ್ವಾಗತಾರ್ಹ ಎಂದು ಕೆ.ಪಿ.ಸಿ.ಸಿ ಸಂಯೋಜಕ ಹಿರೇಮಗಳೂರು ರಾಮಚಂದ್ರ ಹೇಳಿದ್ದಾರೆ.
ಈ ಕುರಿತು ಹೇಳಿಕೆಯಲ್ಲಿ ತಿಳಿಸಿರುವ ಅವರು ಐ.ಐ.ಟಿ, ಐ.ಐ.ಎಂ, ಐ.ಐ.ಎಸ್.ಸಿ ಹಾಗೂ ಎನ್.ಐ.ಟಿ.ನಂಥ ರಾಷ್ಟ್ರೀಯ ಸಂಸ್ಥೆಗಳಲ್ಲಿ ವ್ಯಾಸಂಗ ನಡೆಸಲು ದಲಿತ ವಿದಾರ್ಥಿಗಳಿಗೆ ಪ್ರೋತ್ಸಾಹಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳಗೊಳಿಸಿ ಸರ್ಕಾರ ಆದೇಶಿಸಿ ಬಹಳಷ್ಟು ಅನುಕೂಲ ಕಲ್ಪಿಸಿದೆ ಎಂದಿದ್ದಾರೆ.
ಪಿಯುಸಿಯಲ್ಲಿ ಶೇ.95 ಅಥವಾ ಹೆಚ್ಚಿನ ಅಂಕಗಳನ್ನು ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೆ ಆಡಳಿತ ಮಂಡಳಿಯ ಕೋಟಾದ ಅಡಿಯಲ್ಲಿ ಎಂಬಿಬಿಎಸ್‌ಗೆ ಪ್ರವೇಶ ಪಡೆದಿರುವ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೊದಲನೇ ವರ್ಷದ ಕಾಲೇಜು ಶುಲ್ಕ ರೂ.25 ಲಕ್ಷ ರೂ. ಸರ್ಕಾರ ಭರಿಸಲು ತೀರ್ಮಾನಿಸಿರುವುದು ಹೆಮ್ಮೆಯ ವಿಷಯ ಎಂದು ತಿಳಿಸಿದ್ದಾರೆ.
ಅಲ್ಲದೇ ಸರ್ಕಾರಿ ಕಾಮಗಾರಿಗಳಲ್ಲಿ ಗುತ್ತಿಗೆ ಕೆಲಸಕ್ಕೆ ಹರಸಾಹಸಪಡುತ್ತಿದ್ದ ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ಸರ್ಕಾರ ಸಣ್ಣದೊಂದು ವಿನಾಯಿತಿ ನೀಡಿದೆ. ಟೆಂಡರ್‌ನಲ್ಲಿ ಭಾಗವಹಿಸಲು ಸಂಬoಧಪಟ್ಟ ಕಾಮಗಾರಿ ಯಲ್ಲಿ ನಿರ್ವಹಿಸಬೇಕಾದ ಶೇ.80 ರಷ್ಟು ಷರತ್ತನ್ನು ಶೇ.50ಕ್ಕೆ ಇಳಿಸಿರುವುದು ಜನಾಂಗದ ಗುತ್ತಿಗೆದಾರರಿಗೆ ಸಹಕಾರಿ. ಇದಕ್ಕೆ ಸಹಕರಿಸಿದ ಮುಖ್ಯಮಂತ್ರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೂ ಕೃತ ಜ್ಞತೆ ಸಲ್ಲಿಸುತ್ತೇವೆ ಎಂದಿದ್ದಾರೆ.
——ಸುರೇಶ್