ಚಿಕ್ಕಮಗಳೂರು-ವಿದ್ಯಾರ್ಥಿ ದೆಸೆಯಲ್ಲಿ ವಿದ್ಯಾರ್ಥಿಗಳು ಶ್ರಮವಹಿಸಿ ಅಧ್ಯಯನ ನಡೆಸಿ ಉನ್ನತ ಸ್ಥಾನಮಾನವನ್ನು ಪಡೆದುಕೊಳ್ಳಬೇಕು- ಎಚ್.ಎಸ್.ರುದ್ರಪ್ಪ ಕಿವಿಮಾತು

ಚಿಕ್ಕಮಗಳೂರು-ವಿದ್ಯಾರ್ಥಿ ದೆಸೆಯಲ್ಲಿ ವಿದ್ಯಾರ್ಥಿಗಳು ಶ್ರಮವಹಿಸಿ ಅಧ್ಯಯನ ನಡೆಸಿ ಉನ್ನತ ಸ್ಥಾನಮಾನವನ್ನು ಪಡೆದುಕೊಳ್ಳಬೇಕು ಎಂದು ನಿವೃತ್ತ ನ್ಯಾಯಾಧೀಶ ಎಚ್.ಎಸ್.ರುದ್ರಪ್ಪ ಕಿವಿಮಾತು ಹೇಳಿದರು.

ಇತ್ತೀಗೆಗೆ ನಗರದ ಸಹ್ಯಾದ್ರಿ ಪ್ಯಾರ ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡಿಗೆ ಮತ್ತು ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ವಿದ್ಯಾರ್ಜನೆಗೆ ಹಿಂದಿನ ಕಾಲದಲ್ಲಿ ಇಂದಿನಷ್ಟು ಸೌಲಭ್ಯಗಳು ಇರಲಿಲ್ಲ,ಶಿಕ್ಷಣವಂತರಾಗಿಸಲು ಸರ್ಕಾರ ಇಂದು ಅನೇಕ ಸೌಲಭ್ಯಗಳನ್ನು ನೀಡುತ್ತಿದೆ.ಸೌಲಭ್ಯಗಳ ಸದುಪಯೋಗ ಪಡಿಸಿ ಕೊಂಡು ಶ್ರಮವಹಿಸಿ ವಿದ್ಯಾರ್ಜನೆ ಮಾಡಿ ಗುರಿ ಸಾಧನೆ ಮಾಡುವಂತೆ ತಿಳಿಸಿದರು.

ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆಂದು ಕಷ್ಟಪಡುತ್ತಾರೆ. ಆದರೆ, ಕೆಲ ವಿದ್ಯಾರ್ಥಿಗಳು ದುಶ್ಚಟ ಹಾಗೂ ಮೊಬೈಲ್ ಗೀಳಿಗೆ ಬಿದ್ದು ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ.ಇಂತಹ ದುಶ್ಚಟಗಳಿಗೆ ದಾಸರಾಗದೆ,ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಿ ಪೋಷಕರ ಕನಸು ಈಡೇರಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸಹ್ಯಾದ್ರಿ ಪ್ಯಾರ ಮೆಡಿಕಲ್ ಕಾಲೇಜಿನಲ್ಲಿ ಉತ್ತಮ ಸೌಲಭ್ಯ ಮತ್ತು ಪ್ರಾದ್ಯಾಪಕರು ಇದ್ದು ಅವರ ಮಾರ್ಗದರ್ಶನದಲ್ಲಿ ಶಿಕ್ಷಣ ಪಡೆದು ಸಮಾಜಕ್ಕೆ ಹಾಗೂ ಕಾಲೇಜಿಗೆ ಕೀರ್ತಿ ತರುವಂತೆ ಹೇಳಿದರು.

ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್ ಮಾತನಾಡಿ,ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು.ತಮ್ಮಲ್ಲಿ ದೇಶಪ್ರೇಮ ಬೆಳೆಸಿಕೊಳ್ಳುವಂತೆ ಹೇಳಿದರು.

ಸಹ್ಯಾದ್ರಿ ಪ್ಯಾರ ಮೆಡಿಕಲ್ ಕಾಲೇಜು ಕಾರ್ಯದರ್ಶಿ ನಳಿನಾ ಡಿ’ಸಾ ಮಾತನಾಡಿ, ವಿದ್ಯಾರ್ಥಿಗಳು ಗುರು ಹಿರಿಯರಿಗೆ ಗೌರವ ನೀಡುವುದನ್ನು ಕಲಿಯಬೇಕು. ತಂದೆ ತಾಯಿಗಳ ಪರಿಶ್ರಮಕ್ಕೆ ಗೌರವ ನೀಡಿ ಸಮಯ ವ್ಯರ್ಥ ಮಾಡದೆ ಶಿಕ್ಷಣವಂತರಾಗಿ ದೇಶಕ್ಕೆ ಉತ್ತಮ ಪ್ರಜೆಗಳಾಗುವಂತೆ ಹೇಳಿದ ಅವರು,ನಮ್ಮ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ದೇಶ ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದು ನಮ್ಮ
ಕಾಲೇಜಿನ ಹೆಗ್ಗಳಿಕೆಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಹೊಸ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಉಲ್ಲಾಸ್ ಕುಮಾರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪ್ರಜ್ಞಾ ಸ್ವಾಗತಿಸಿದರು,ಉಪನ್ಯಾಸಕಿ ವಜೀದಾ ನಿರೂಪಿಸಿದರು,ಪ್ರಗತಿ
ವಂದಿಸಿದರು.

—————-ಪ್ರಕಾಶ್

Leave a Reply

Your email address will not be published. Required fields are marked *

× How can I help you?