ಚಿಕ್ಕಮಗಳೂರು:ಫೆಂಗಲ್ ಚಂಡಮಾರುತದ ಹಿನ್ನೆಲೆ ಜಿಲ್ಲೆಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ

ಚಿಕ್ಕಮಗಳೂರು:ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಗೆ ಡಿಸೆಂಬರ್ 03 ರಂದು ಆರೆಂಜ್ ಅಲರ್ಟ್ ಹಾಗೂ ಡಿಸೆಂಬರ್ 04 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಮುಂದಿನ ಎರಡು ದಿನಗಳು ಅಥವಾ ಮಳೆ ಕಡಿಮೆಯಾಗುವವರೆಗೆ ಮುಂಜಾಗ್ರತಾ ಕ್ರಮವಹಿಸಬೇಕಾಗಿ ಸೂಚಿಸಲಾಗಿದೆ.

ಸಾರ್ವಜನಿಕರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸಬೇಕು.ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳ, ಕೆರೆ ಕಟ್ಟೆಗಳಿಗೆ ತೆರಳಬಾರದು ಹಾಗೂ ಮಳೆಯಿಂದಾಗಿ ಧರೆ, ಗುಡ್ಡ ಕುಸಿತ ಉಂಟಾಗುವುದರಿಂದ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

× How can I help you?