ಚಿಕ್ಕಮಗಳೂರು-ಯುವನಿಧಿ ನೋಂದಣಿ ಸಪ್ತಾಹ-ಜ.20 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ-ಕೀರ್ತನಾ

ಚಿಕ್ಕಮಗಳೂರು-ರಾಜ್ಯಸರ್ಕಾರ ಅನುಷ್ಟಾನಗೊಳಿಸಿರುವ ಯುವನಿಧಿ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಕೌಶಲ್ಯಾಭಿವೃದ್ದಿ ಕಾರ್ಯಗಳಲ್ಲಿ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಳಸಿಕೊಂಡು ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಕೀರ್ತನಾ ಹೇಳಿದರು.

ನಗರದ ಐಡಿಎಸ್ ಕಾಲೇಜಿನಲ್ಲಿ ಯುವನಿಧಿ ಯೋಜನೆ ನೊಂದಣೀ ಸಪ್ತಾಹ ಹಾಗೂ ಕೌಶಾಲಾಭಿವೃ ದ್ದಿ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಪದವಿ ನಂತರ ಯುವಜನರು ಆರ್ಥಿಕ ತೊಂದರೆ ಎದುರಿಸಬಾರದು ಎಂಬ ಕಾರಣಕ್ಕೆ ಪದವೀಧರರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಅನೇಕರಿಗೆ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಪುಸ್ತಕ ಖರೀದಿ ಸಲು ಹಾಗೂ ಇನ್ನಿತರ ಅನುಕೂಲಕ್ಕೆ ಸಹಾಯವಾಗುತ್ತಿದೆ. ನೋಂದಣಿ ಮಾಡಿಕೊಳ್ಳದೇ ಇರುವವರು ತ್ವರಿತವಾಗಿ ನೋಂದಾಯಿಸಿಕೊoಡು ಲಾಭ ಪಡೆದುಕೊಳ್ಳಬೇಕು ಎಂದರು.

2023 -24ರಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಉತ್ತೀರ್ಣರಾಗಿ ಕನಿಷ್ಠ 6 ತಿಂಗಳವರೆಗೆ ಸರ್ಕಾರಿ ಆಥವಾ ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದಿರುವ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ನೊಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.

ಯುವನಿಧಿ ಯೋಜನೆಯ ಸದ್ಭಳಕೆ ಹಾಗೂ ಯಶಸ್ವಿಗಾಗಿ ನೊಂದಣಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಜಿಲ್ಲೆಯ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಕಾಲೇಜಿನ ಪ್ರಾಂಶುಪಾಲರು, ಮುಖ್ಯಸ್ಥರು ಸಹಕರಿಸಿ ನಿರುದ್ಯೋಗಿ ಅಭ್ಯರ್ಥಿಗಳನ್ನು ಪ್ರೇರೇಪಿಸಬೇಕು ಎಂದರು.

ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನoದಸ್ವಾಮಿ ಮಾತನಾಡಿ, ಪದವಿ ಹಾಗೂ ಸ್ನಾತಕೋತ್ತರ ಪದವೀಧರರಿಗೆ ಪ್ರತಿ ಮಾಹೆ 3 ಸಾವಿರ ರೂ. ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ 1500 ರೂ.ಗಳನ್ನು ನಿರುದ್ಯೋಗ ಭತ್ಯೆಯಾಗಿ ನೊಂದಣಿಯಾಗುವ ಮುಂದಿನ 2 ವರ್ಷಗಳವರೆಗೆ ನೀಡಲಾಗುವುದು ಎಂದು ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ಕುಟುಂಬದಲ್ಲಿ ಪದವಿ ಪೂರೈಸಿದ ಅಣ್ಣತಮ್ಮಂದಿರು, ಅಕ್ಕಪಕ್ಕದ ನಿವಾಸಿಗಳ ಬಳಿ ಯುವನಿಧಿ ಸೌಲಭ್ಯದ ಮಾಹಿತಿ ನೀಡಬೇಕು. ಅರ್ಜಿ ಸಲ್ಲಿಸಲು ಜಿಲ್ಲೆಯ ಪ್ರತಿ ಪದವಿ ಕಾಲೇಜುಗಳಲ್ಲಿ ಉದ್ಯೋಗ ವಿನಿಮಯ ಕೇಂದ್ರ ತೆರೆಯಲಾಗಿದ್ದು, ಅರ್ಜಿ ಸಲ್ಲಿಸಲು ಪ್ರೇರೇಪಿಸಿದರೆ ಆರ್ಥಿಕ ತೊಂದರೆಯಿoದ ಬಳಲುತ್ತಿರುವ ಯುವಸಮೂಹಕ್ಕೆ ಸಹಾಯವಾಗಲಿದೆ ಎಂದು ಹೇಳಿದರು.

ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟಾರೆ 8 ಸಾವಿರಕ್ಕೂ ಹೆಚ್ಚು ಜನರು ಯುವನಿಧಿ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದು ಇನ್ನಷ್ಟು ಯುವಕರಿಗೆ ಪ್ರೇರೇಪಿಸುವ ನಿಟ್ಟಿನಲ್ಲಿ ಯುವನಿಧಿ ನೊಂದಣಿ ಸಪ್ತಾಹ ಇಂದಿನಿoದ ಜ.20 ರವರೆಗೆ ಹಮ್ಮಿಕೊಂಡಿದ್ದು ಪದವಿ ಪೂರೈಸಿದ ಯುವಕರು ಅರ್ಜಿ ಸಲ್ಲಿಸುವ ಮುಖಾಂತರ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಐಡಿಎಸ್‌ಜಿ ಕಾಲೇಜಿನ ಪ್ರಾಂಶುಪಾಲೆ ಪುಷ್ಪಭಾರತಿ,ವಿದ್ಯಾರ್ಥಿಗಳು ಯುವನಿಧಿ ಸೌಲಭ್ಯದ ಸಮಗ್ರ ಮಾಹಿತಿಯನ್ನು ಎಲ್ಲೆಡೆ ಹರಡಿ, ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿರುವ ಯುವಕರಿಗೆ ತಿಳಿಸಿದರೆ ಮಾತ್ರ ಸರ್ಕಾರ ಜಾರಿಗೊಳಿಸಿರುವ ಅನುಷ್ಟಾನವು ಸದ್ಬಳಕೆಯಾದಂತೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಮಲ್ಲೇಶಸ್ವಾಮಿ, ಜಿಲ್ಲಾ ಸದಸ್ಯರುಗಳಾದ ಆರ್.ಎಂ.ಬಸವರಾಜ್, ಜೇಮ್ಸ್ ಡಿಸೋಜಾ, ಕೌಶಲ್ಯಾಭಿವೃದ್ದಿ ಅಧಿಕಾರಿ ಪ್ರಶಾಂತ್, ಉದ್ಯೋಗ ವಿನಿಮಯಾಧಿಕಾರಿ ಮಂಜುನಾಥ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

———–——ಸುರೇಶ್

Leave a Reply

Your email address will not be published. Required fields are marked *

× How can I help you?