ಕೆ.ಆರ್.ಪೇಟೆ: ತಾಲ್ಲೂಕಿನ ಬಲ್ಲೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ನಿರ್ದೇಶಕರಾಗಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ತಮ್ಮ ಗೆಲುವಿಗೆ ಸಹಕರಿಸಿದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಡಾಲು ರವಿ ಅವರನ್ನು ಭೇಟಿ ಮಾಡಿ ಗೌರವಿಸುವ ಮೂಲಕ ಕೃತಜ್ಞತೆಗಳನ್ನು ಸಲ್ಲಿಸಿದರು.
ಬಲ್ಲೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾತ ಸಂಘದ ನೂತನ ನಿರ್ದೇಶಕರಾದ ಬಲ್ಲೇನಹಳ್ಳಿ ಬಿ.ಸಿ.ರಮೇಶ್, ಕಬ್ಬಲಗೆರೆಪುರ ಪುಟ್ಟಸ್ವಾಮೀಗೌಡ, ಎಂ.ಎಸ್.ಜಯರಾಮೇಗೌಡ, ಎಸ್.ಯೋಗ, ಬಿ.ವಿ.ಲಕ್ಷ್ಮೀನಾರಾಯಣ್, ಪವಿತ್ರಯಾಲಕ್ಕೀಗೌಡ, ನಾಗರಾಜು, ದೊಡ್ಡಗಾಡಿಗನಹಳ್ಳಿ ಕುಮಾರ್ ಅವರ ನೇತೃತ್ವದಲ್ಲಿ ಮನ್ ಮುಲ್ ನಿರ್ದೇಶಕ ಡಾಲು ರವಿ ಅವರಿಗೆ ಶಾಲು ಹೊದಿಸಿ, ಫಲತಾಂಬೂಲ ನೀಡಿ ಮೈಸೂರು ಪೇಟ ತೊಡಿಸಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಪಿ.ಎಲ್.ಡಿ.ಬ್ಯಾಂಕ್ ನಿರ್ದೇಶಕ ಕಬ್ಬಲಗೆರೆಪುರ ಪುಟ್ಟಸ್ವಾಮೀಗೌಡ, ಮಾಳಗೂರು ಜಗದೀಶ್, ಗ್ರಾ.ಪಂ.ಮಾಜಿ ಅಧ್ಯಕ್ಷ ಬಲ್ಲೇನಹಳ್ಳಿ ರಮೇಶ್, ಗ್ರಾ.ಪಂ.ಮಾಜಿ ಸದಸ್ಯ ದೊಡ್ಡಗಾಡಿಗನಹಳ್ಳಿ ಕುಮಾರ್, ಮುಖಂಡರಾದ ಪುಟ್ಟರಾಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಶ್ರೀನಿವಾಸ್ ಆರ್.