ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಲ್ಲೇನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೊಡ್ಡಗಾಡಿಗನಹಳ್ಳಿ ಡಿ.ವಿ.ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಅಟ್ಟುಪ್ಪೆ ಎಸ್.ಯೋಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನ ಬಯಸಿ ಡಿ.ವಿ.ಕುಮಾರ್, ಉಪಾಧ್ಯಕ್ಷ ಸ್ಥಾನ ಬಯಸಿ ಎಸ್.ಯೋಗ ಅವರನ್ನು ಹೊರತು ಪಡಿಸಿ ಬೇರೆ ಯಾರೂ ಸಹ ನಾಮಪತ್ರ ಸಲ್ಲಿಸದೇ ಇರುವ ಕಾರಣ ಅವಿರೋಧ ಆಯ್ಕೆ ನಡೆಯಿತು.
ಚುನಾವಣಾಧಿಕಾರಿಯಾಗಿ ತಾಲ್ಲೂಕು ಸಹಕಾರ ಅಭಿವೃದ್ದಿ ಅಧಿಕಾರಿ ಹೆಚ್.ಬಿ.ಭರತ್‌ಕುಮಾರ್, ಸಹ ಚುನಾವಣಾಧಿಕಾರಿಯಾಗಿ ಸಂಘದ ಸಿಇಓ ಅರುಣ್‌ಕುಮಾರ್ ಕಾರ್ಯನಿರ್ವಹಣೆ ಮಾಡಿದರು.

ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಬಲ್ಲೇನಹಳ್ಳಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಿ.ಸಿ.ರಮೇಶ್ ಅವರು ಸೊಸೈಟಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಗೆಲುವಿಗೆ ಕಾರಣಕರ್ತರಾದ ಎಲ್ಲಾ ನಿರ್ದೇಶಕರಿಗೆ ಹಾಗೂ ಸಂಘದ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರಿಗೆ ಪಕ್ಷದ ಮುಖಂಡರಿಗೆ, ಶೇರುದಾರ ಮತದಾರ ಬಂಧುಗಳಿಗೆ ಹಾಗೂ ಗೆಲುವಿಗೆ ಹಗಲಿರುಳು ಶ್ರಮಿಸಿದ ಮುಖಂಡರುಗಳಿಗೆ ಹೃದಯ ತುಂಬಿದ ಕೃತಜ್ಞತೆಗಳನ್ನು ಸಂಘವನ್ನು ಮತ್ತಷ್ಟು ಅಭಿವೃದ್ದಿ ಪಥದತ್ತ ತೆಗೆದುಕೊಂಡು ಹೋಗುತ್ತೇವೆ ಮುಂದಿನ 5 ವರ್ಷದ ಅವಧಿಗೆ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿದರು. ಮುಂದಿನ 5 ವರ್ಷದ ಅವಧಿಗೆ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿದರು.

ನೂತನ ಅಧ್ಯಕ್ಷ ದೊಡ್ಡಗಾಡಿಗನಹಳ್ಳಿ ಕುಮಾರ್ ಮಾತನಾಡಿ ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಚುನಾಯಿಸಿದ ನಿರ್ದೇಶಕರಿಗೆ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಆಬಾರಿಯಾಗಿರುವುದಾಗಿ ತಿಳಿಸಿದರು. ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭಾ ಹಿರಿಯ ಸದಸ್ಯ ಕಾಂಗ್ರೆಸ್ ಮುಖಂಡ ಕೆ.ಬಿ.ಮಹೇಶ್‌ಕುಮಾರ್, ಯುವ ಮುಖಂಡ ಸಿವಿಲ್ ಇಂಜಿನಿಯರ್ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಬಿ.ಎಸ್.ರಾಮು, ಸಂಘದ ನೂತನ ನಿರ್ದೇಶಕರಾದ ಎಂ.ಎಸ್.ಜಯರಾಮೇಗೌಡ, ಬಿ.ವಿ.ಲಕ್ಷ್ಮೀ ನಾರಾಯಣ್, ಪವಿತ್ರಯಾಲಕ್ಕೀಗೌಡ, ನಾಗರಾಜು, ಬಲ್ಲೇನಹಳ್ಳಿ ರಮೇಶ್, ಕಬ್ಬಲಗೆರೆಪುರ ಪುಟ್ಟಸ್ವಾಮಿಗೌಡ, ಗ್ರಾ.ಪಂ.ಸದಸ್ಯ ರಂಗರಾಜು, ಕುಮಾರ್, ಅಟ್ಟುಪ್ಪೆ ಅರುಣ್ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.
- ಶ್ರೀನಿವಾಸ್ ಆರ್