ಚಿಕ್ಕಮಗಳೂರು:- ತಾಲ್ಲೂಕಿನ ಮರ್ಲೆ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ರಾಜ್ಯ ಸರ್ಕಾರದ ಉಚಿತ ಐದು ಕೆಜಿ ಅಕ್ಕಿ ವಿತರಣಾ ಕಾರ್ಯಕ್ರಮಕ್ಕೆ ಭದ್ರಾ ಕಾಡ ನಿಗಮದ ಅಧ್ಯಕ್ಷ ಕೆ.ಪಿ.ಅಂಶು ಮಂತ್ ಬುಧವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ರಾಜ್ಯ ಸರ್ಕಾರವು ಪಂಚ ಗ್ಯಾರಂಟಿಗಳ ಪೈಕಿ ಅಕ್ಕಿ ಬದಲು ಪ್ರತಿ ಯೊಬ್ಬರಿಗೆ 5 ಕೆಜಿಗೆ ಸಂಬಂಧಿತ 170 ಗಳನ್ನು ಇದುವರೆಗೂ ನೇರ ನಗದು ವರ್ಗಾವಣೆ ಮಾಡುತ್ತಾ ಬಂದಿ ದೆ. ಪ್ರಸ್ತುತ ಅಕ್ಕಿ ಲಭ್ಯತೆ ಇರುವ ಕಾರಣ ನಗದು ಬದಲಾಗಿ ಒಟ್ಟು ಪ್ರತಿ ವ್ಯಕ್ತಿಗೆ ೧೦ ಅಕ್ಕಿ ವಿತರಿಸಲಾಗುತ್ತಿದೆ ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದ ಸ್ವಾಮಿ ಮಾತನಾಡಿ ಅತ್ಯಂತ ಚುರುಕಾಗಿ ಮತ್ತು ಫಲಾನುಭವಿಗಳಿಗೆ ನ್ಯಾಯ ಒದಗಿಸುವಲ್ಲಿ ಕೆಲಸ ಮಾಡುತ್ತಿರುವು ದರಿಂದ ರಾಜ್ಯದಲ್ಲಿ ಅನುಷ್ಠಾನದಲ್ಲಿ ಚಿಕ್ಕಮಗಳೂರು ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿರುವುದು ಸಂ ತೋಷದ ಸಂಗತಿ ಎಂದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಪ್ರಾಧಿಕಾರದ ಸದಸ್ಯರಾದ ಆರ್.ಎಂ. ಬಸವರಾಜು, ತಾಲೂಕು ಸಮಿತಿ ಸದಸ್ಯರುಗಳಾದ ಅನ್ಸರ್, ನಾಗೇಶ್ ರಾಜ್, ಹುಬ್ಬಳ್ಳಿ ಕಾಂಗ್ರೆಸ್ ಅಧ್ಯಕ್ಷ ವಿಜಯ ಕುಮಾರ್, ಗ್ರಾ.ಪಂ. ಉಪಾಧ್ಯಕ್ಷ ನಾಗರಾಜು, ಸಂತೋಷ್, ನ್ಯಾಯಬೆಲೆ ಅಂಗಡಿ ಮಾಲೀಕ ಮಂಜುನಾಥ್, ಗ್ರಾಮಸ್ಥರು ಹಾಜರಿದ್ದರು.
-ಸುರೇಶ್ ಎನ್.