ಕೆ.ಆರ್.ಪೇಟೆ:ಪರಮಪೂಜ್ಯ ಶ್ರೀ ಡಾ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆಯಂತೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಮೂಲಕ ಮಾಡದ ಸೇವಾ ಕ್ಷೇತ್ರವಿಲ್ಲ ಎಂದು ಶ್ರೀ ಧರ್ಮಸ್ಥಳ ಸಂಘದ ಮೇಲ್ವಿಚಾರಕಿ ಗುಣಶ್ರೀ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಪಿ.ಜಿ.ಡಿ ಕೊಪ್ಪಲು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯೋಜನೆಗಳ ಬಗ್ಗೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರನ್ನು ಜಾಗೃತಿಗೊಳಿಸಿ ಆರ್ಥಿಕ ಪ್ರಜ್ಞಾವಂತಿಕೆಯನ್ನು ಬೆಳೆಸುವ ಕೆಲಸ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ.ಆಡು ಮುಟ್ಟದ ಸೊಪ್ಪಿಲ್ಲ, ಪೂಜ್ಯ ಡಾ.ವೀರೇಂದ್ರ ಹೆಗ್ಗಡೆಯವರು ಮಾಡದ ಸೇವಾ ಕ್ಷೇತ್ರವಿಲ್ಲ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹಮ್ಮಿಕೊಂಡ ಸಮಾಜಮುಖಿ ಕಾರ್ಯಗಳು ಹಾಗೂ ವ್ಯಸನಮುಕ್ತ ಆರೋಗ್ಯ ಪೂರ್ಣ ಸಮಾಜ ರೂಪಿಸುವ ಕಾರ್ಯ ಸ್ತುತ್ಯಾರ್ಹವಾಗಿವೆ.
ಕಿರು ಆರ್ಥಿಕ ಯೋಜನೆ ಮೂಲಕ ಸ್ವ-ಸಹಾಯ ಸಂಘಗಳ ಸಹಭಾಗಿತ್ವದಲ್ಲಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.ಶೇಕಡಾ ನೂರು ಸಾಲ ಮರು ಪಾವತಿಯಾಗುತ್ತಿದೆ.ಮಹಿಳಾ ಸಂಘಗಳು ಸೇರಿದಂತೆ ರೈತರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನೇಕ ಸೌಲಭ್ಯ ಜೊತೆಗೆ ಹೈನುಗಾರಿಕೆಗೂ ಹೆಚ್ಚು ಮಹತ್ವ ನೀಡುವ ಸಂಘದ ಯೋಜನೆಗಳನ್ನು ರೈತರು ಸಮರ್ಪಕವಾಗಿ ಸದ್ಬಳಸಿಕೊಳ್ಳಬೇಕು.ಭಾರತದ ಆದ್ಯಾತ್ಮಿಕತೆ, ಸಂಸ್ಕoತಿ-ಸಂಸ್ಕಾರ ಹಾಗೂ ಕುಟುಂಬ ಜೀವನ ಪದ್ಧತಿಯಲ್ಲಿ ವಿಶ್ವಕ್ಕೆ ಮಾದರಿಯಾಗಿದೆ.ಮನೆಯಲ್ಲಿ ಸ್ವರ್ಗ-ನರಕ ಎರಡೂ ಇದೆ ಗಂಡ-ಹೆಂಡತಿ ಹಾಗೂ ಕುಟುಂಬದ ಸದಸ್ಯರೆಲ್ಲರೂ ಪರಸ್ಪರ ಪ್ರೀತಿ-ವಿಶ್ವಾಸದಿಂದ ಅನ್ಯೋನ್ಯತೆಯಿಂದ ಸೌಹಾರ್ದಯುತ ಜೀವನ ನಡೆಸಿದರೆ ಸ್ವರ್ಗ ಸುಖ ಅನುಭವಿಸಬಹುದು. ಆಗ ಮನೆಯೇ ಮಂತ್ರಾಲಯವಾಗುತ್ತದೆ. ಮನಸೇ ದೇವಾಲಯವಾಗುತ್ತದೆ.ಪರಸ್ಪರ ಅನ್ಯೋನ್ಯತೆ, ಹೊಂದಾಣಿಕೆ ಹಾಗೂ ಪ್ರೀತಿ-ವಿಶ್ವಾಸ ಇಲ್ಲವಾದಲ್ಲಿ ಮನೆಯೇ ನರಕವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಒಕ್ಕೂಟ ಅಧ್ಯಕ್ಷೆ ಸಾವಿತ್ರಮ್ಮ ಮುಖಂಡರಾದ ರಮೇಶ್ ಪದಾಧಿಕಾರಿ ಅಶ್ವಿನಿ,ನಿಸರ್ಗ, ಸುಪ್ರಿತಾ,ಸಿಂಧು,ದೀಪಿಕಾ,ಸೇವಾ ಪ್ರತಿ ನಿಧಿ,ಶೋಭಾ ಸೇರಿದಂತೆ ಗ್ರಾಮಸ್ಥರು ಇದ್ದರು.
——————————–ಮನು ಮಾಕವಳ್ಳಿ ಕೆ ಆರ್ ಪೇಟೆ