ಕೊಟ್ಟಿಗೆಹಾರ ಬಾಳೂರು ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ದೇವರು ಮನೆ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು. ಅರಣ್ಯ ಇಲಾಖೆ ಹರಸಾಹಸಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದೇವರು ಮನೆಯು ಐತಿಹಾಸಿಕ ಸ್ಥಳವಾಗಿದ್ದು ಇಲ್ಲಿಗೆ ಸಾವಿರಾರು ಜನರು ಬರುತ್ತಾರೆ. ಯಾರೋ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಹಚ್ಚಿದ್ದು ಹತ್ತರೂ ಎಕರೆ ಹುಲ್ಲುಗಾವಲು, ಬಸ್ಮವಾಗಿದೆ. ಕೂಡಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ ಈ ಸಂದರ್ಭದಲ್ಲಿಉಪವಲಯ ಅರಣ್ಯಾಧಿಕಾರಿ ರಂಜಿತ್, ಗಸ್ತು ಅರಣ್ಯ ಪಾಲಕ ಅಭಿಜಿತ್, ಉಮೇಶ್, ಅರಣ್ಯ ವೀಕ್ಷಕ ದಿನೇಶ್ ಇದ್ದರು.