ಎಚ್.ಡಿ.ಕೋಟೆ: ಹಳ್ಳಿಗಾಡಿನ ಜನರಿಗೆ ಆರೋಗ್ಯ ವೃದ್ಧಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿರುವ ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನೀಯ ಎಂದು ತಾಲೂಕು ಅರೋಗ್ಯಾಧಿಕಾರಿ ಡಾ. ರವಿಕುಮಾರ್ ತಿಳಿಸಿದರು.
ಸರಗೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾರ್ಟ್ ಸಂಸ್ಥೆ ಮೈಸೂರು, ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿ ಹೆಚ್. ಡಿ ಕೋಟೆ, ಸಮುದಾಯ ಆರೋಗ್ಯ ಕೇಂದ್ರ ಸರಗೂರು, ಪಟ್ಟಣ ಪಂಚಾಯಿತಿ ಸರಗೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಆರೋಗ್ಯ ಶಿಬಿರವನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಇಂತಹ ಆರೋಗ್ಯ ಕಾರ್ಯಕ್ರಮಗಳು ಹೆಚ್ಚಿನದಾಗಿ ಆಗಬೇಕು ಮತ್ತು ಇತ್ತೀಚಿನ ದಿನಗಳಲ್ಲಿ ಕ್ಯಾನರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕ್ಯಾನರ್ ಆರೋಗ್ಯ ಶಿಬಿರಗಳನ್ನು ಆಯೋಜಿಸುವಂತೆ ಮನವಿ ಮಾಡಿದರು.
ನಂತರ ಮಾತನಾಡಿದ ಹಾರ್ಟ್ ಸಂಸ್ಥೆ ಅಧ್ಯಕ್ಷ ಶಿವಕುಮಾರ್, ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈ ಸಂಸ್ಥೆಯು ಹುಟ್ಟಿದ್ದು ನಮ್ಮ ತಾಲೂಕಿನಲ್ಲಿ ಆರೋಗ್ಯ ಶಿಬಿರಗಳನ್ನು ಮಾಡುತ್ತಿದ್ದು ಪ್ರತಿಯೊಬ್ಬರು ಶಿಬಿರದ ಪ್ರಯೋಜನ ಪಡೆದು ಅರೋಗ್ಯವಂತರಾಗುವಂತೆ ತಿಳಿಸಿದರು.

ಸಂಧಿವಾತ ತಜ್ಞ ಮಹಾಬಲೆಶ್ವರ ಮಾಮದಪುರ ಸಂಧಿವಾತ ಲಕ್ಷಣಗಳು, ವಿಧಗಳು, ಮತ್ತು ಪರಿಹಾರಗಳ ಬಗ್ಗೆ ತಿಳಿಸಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷರು ಮಾತನಾಡಿದರು.
ವೈದ್ಯಧಿಕಾರಿ ಡಾ. ಪಾರ್ಥಸಾರಥಿ, ಹಾರ್ಟ್ ಸಂಸ್ಥೆ ಅಧ್ಯಕ್ಷ ಶಿವಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಆರೋಗ್ಯ ನಿರೀಕ್ಷಿಕರಾದ ಅನಿತಾ, ಮೇಲ್ವಿಚಾರಕ ದಿನೇಶ್, ಎ ಎಸ್ ಜಿ ಕಣ್ಣಿನ ಆಸ್ಪತ್ರೆ ಮಹೇಶ್, ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕರಾದ ಜಗದೀಶ್, ರವಿರಾಜ್ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಸಾರ್ವಜನಿಕರು ಇದ್ದರು.
-ಶಿವು, ಕೋಟೆ