ಕೆ.ಆರ್.ಪೇಟೆ: ತಾಲ್ಲೂಕಿನ ಹರಿಹರಪುರ ಗ್ರಾಮದ ವಿನೋದ್ ನಂಜಪ್ಪ ಅವರ ಟೀ ಕ್ಯಾಂಟೀನ್ ನಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಪಾರ ಹಾನಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಹೆಚ್.ಟಿ.ಮಂಜು ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ನಷ್ಟಕ್ಕೆ ಒಳಗಾಗಿರುವ ಕ್ಯಾಂಟೀನ್ ಮಾಲೀಕ ವಿನೋದ್ ನಂಜಪ್ಪ ಕುಟುಂಬದವರಿಗೆ ಸಾಂತ್ವನ ಹೇಳಿ ಆರ್ಥಿಕ ನೆರವು ನೀಡಿ, ಗ್ಯಾಸ್ ಏಜೆನ್ಸಿ ಕಡೆಯಿಂದ ಬರಬಹುದಾದ ವಿಮಾ ಪರಿಹಾರ ಕೊಡಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಮೂಲಕ ಶಾಸಕರು ಸೂಚಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಅನೇಕ ಮುಖಂಡರು ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.
- ಶ್ರೀನಿವಾಸ್ ಆರ್