ಎಚ್.ಡಿ.ಕೋಟೆ: ತಾಲೂಕಿನ ತುಂಬಸೋಗೆ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕ ಟಿ.ಎಸ್.ಚಂದ್ರಪ್ಪ (80) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೃತರಿಗೆ ಓರ್ವ ಪುತ್ರ, ಪುತ್ರಿ ಅಪಾರ ಬಂಧು-ಬಳಗ ಇದ್ದಾರೆ. ಗ್ರಾಮದ ರುದ್ರಭೂಮಿಯಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.

ಸಂತಾಪ : ಎಚ್.ಡಿ.ಕೋಟೆ ಹಾಗೂ ಸರಗೂರು ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳು ಸೇರಿದಂತೆ ಸರ್ವ ಸದಸ್ಯರು ಸಂತಾಪ ಸೂಚಿಸಿದ್ದಾರೆ.
- ಶಿವಕುಮಾರ