ಹಾಸನ – ಕರ್ನಾಟಕ ಜಾನಪದ ಅಕಾಡೆಮಿಯ ಯೋಜನೆಗಳಲ್ಲಿ ಜಾನಪದ ಕಲೆಗಳಿಗೆ ತನ್ನನ್ನು ತಾನು ಅರ್ಪಿಸಿಕೊಂಡಿರುವ ಜಾನಪದ ಕಲಾವಿದರಿಗೆ, ಜಾನಪದ ಕ್ಷೇತ್ರ ತಜ್ಞರಿಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡಲು 2024 ನೇ ಸಾಲಿನಲ್ಲಿ ರಾಜ್ಯದ 3೦ ಜಿಲ್ಲೆಗಳಿಂದ 3೦ ಹಿರಿಯ ಜಾನಪದ ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ, ಇಬ್ಬರು ಜಾನಪದ ತಜ್ಞರಿಗೆ ತಜ್ಞ ಪ್ರಶಸ್ತಿ ನೀಡಲಾಗುತ್ತದೆ.
ಬೆಂಗಳೂರಿನಲ್ಲಿ ನಡೆದ ಸರ್ವಸದಸ್ಯರ ಸಭೆಯ ತೀರ್ಮಾನದಂತೆ ಹಾಸನ ಜಿಲ್ಲೆಯಿಂದ ಬಿ.ಟಿ.ಮಾನವ ಕೋಲಾಟ ಹಾಗೂ ಜಾನಪದ ಕ್ಷೇತ್ರದಿಂದ ೨೦೨೪ ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ವಿಜೇತರಿಗೆ ರೂ.25000 ಪ್ರಶಸ್ತಿ ಮೊತ್ತದ ಜೊತೆಗೆ ಸ್ಮರಣಿಕೆ, ಶಾಲು, ಹಾರ, ಫಲತಾಂಬೂಲ ನೀಡಿ ಗೌರವಿಸಲಾಗುತ್ತದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ.