ಹಾಸನ – ಇತ್ತೀಚಿನ ದಿನಗಳಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಗೆ ಕಾಲೇಜುಗಳನ್ನು ಬಿಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ ಸಾರ್ವಜನಿಕರು ತಮ್ಮ ಮಕ್ಕಳು ವ್ಯಾಸಾಂಗ ಮುದುವರೆಸಲು ಪ್ರೋತ್ಸಾಹಿಸಿ ಉನ್ನತ ವಿದ್ಯಾಭ್ಯಾಸ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಹಾಸನದ ಸ್ವಾಯತ್ತ ಸರ್ಕಾರಿ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನ ಸಹಯೋಗದಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ 2025-26 ನೇ ಶೈಕ್ಷಣಿಕ ಸಾಲಿನ ಪದವಿ ತರಗತಿಗಳಿಗೆ ಪ್ರವೇಶಾತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ವಿಷಯಗಳಲ್ಲಿ ಪದವಿಯನ್ನು ಮಾಡುವವರು ಬಹಳ ವಿರಳವಾಗಿದ್ದಾರೆ.
ಮೆಡಿಕಲ್, ಇಂಜಿನಿಯರಿಂಗ್ ಕ್ಷೇತ್ರಗಳಲ್ಲಿ ವಿದ್ಯಾಭ್ಯಾಸ ಮಾಡಲು ಇಷ್ಟಪಡುತ್ತಾರೆ, ವಿದ್ಯಾರ್ಥಿಗಳು ಯಾವ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದೀರಿ ಆ ವಿಭಾಗಕ್ಕೆ, ಕಾಲೇಜಿಗೆ ಕೀರ್ತಿ ತರುವಂತಹ ಕೆಲಸ ಮಾಡಬೇಕು ಎಂದರು.
ಕಲಾ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಲ್ಲಿ ಕೀಳರಿಮೆ ಬೇಡ ಇತ್ತೀಚಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಹಳ ಪ್ರಯೋಜನಕಾರಿ ವಿಷಯ ಗಳು ಕಲಾ ವಿಭಾಗದಲ್ಲಿಯೇ ಇವೆ, ವಿದ್ಯಾರ್ಥಿಗಳು ಯಶಸ್ಸು ಸಾಧಿಸಲು ಉತ್ತಮ ಕೌಶಲ್ಯಗಳನ್ನೂ ಬಳಸಿಕೊಂಡು ಕಠಿಣ ಪರಿಶ್ರಮದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಿಕೊಂಡು ಸಾಧನೆ ಮಾಡಿ ಎಂದು ತಿಳಿಸಿದರು.
ಸರ್ಕಾರಿ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಕಾಲೇಜಿನ ಎನ್.ಸಿ.ಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.