ಹಾಸನ -ಹಾಸನದ ಜಿಲ್ಲಾ ಉದ್ಯೋಗ ವಿನಿಮಯ ಕಚೆೆÃರಿ ವತಿಯಿಂದ ನಿರುದ್ಯೋಗ ಯುವಕ ಯುವತಿಯರಿಗೆ ಫೆ.೧೨ ರಂದು ಬುಧವಾರ ಬೆಳಗ್ಗೆ ೧೦ ರಿಂದ ೧.೩೦ ಗಂಟೆವರೆಗೆ ಸರ್ಕಾರಿ ಐ.ಟಿ.ಐ ಕಾಲೇಜು ಆವರಣದಲ್ಲಿ ವಿವಿಧ ಖಾಸಗೀ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ/ಐ.ಟಿ.ಐ/ ಪಿ.ಯು.ಸಿ/ ಡಿಪ್ಲೋಮಾ ಪದವಿ ತೇರ್ಗಡೆ ಹೊಂದಿದ ವಯೋಮಿತಿ ೧೮-೩೦ ವರ್ಷದ ಪುರುಷ/ಮಹಿಳಾ ಆಸಕ್ತಿಯುಳ್ಳ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 08172-296374, 9743144950, ಹಾಗೂ 8722606874 ರವರನ್ನು ಕಚೇರಿ ವೇಳೆಯಲ್ಲಿ ಮಾತ್ರ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.