ತುಮಕೂರು-ಜಾತಿ/ಆದಾಯ ಪ್ರಮಾಣ ಪತ್ರಕ್ಕಾಗಿ ಸಹಾಯವಾಣಿ

ತುಮಕೂರು: ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು/ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 7304975519 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.


ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ/ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ನಗರದ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿರುವ ಇಂಟಿಗ್ರೇಟೆಡ್ ಸಿಟಿ ಮ್ಯಾನೇಜ್‌ಮೆಂಟ್ ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್‌ನಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ.


ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಸಾರ್ವಜನಿಕರಿಗೆ ತಿಳಿಯಪಡಿಸಿದ್ದಾರೆ.

Leave a Reply

Your email address will not be published. Required fields are marked *

× How can I help you?